Ramanagar: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ, ಬೈರತಿ ಬಸವರಾಜ, ಶಾಸಕರಾದ ಅನಿತಾ ಕುಮಾರಸ್ವಾಮಿ, ಸಿ ಪಿ ಯೋಗೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ಡಾ,ಬಿ.ಆರ್.ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ ಹಾಗೂ ಸಂಸದ ಡಿ.ಕೆ ಸುರೇಶ್ ಅವರ ನಡುವೆ ಮಾತಿನ ವಾಗ್ವದ ನಡೆದಿದ್ದು, ತೀವ್ರ ಗದ್ದಲ ಗಲಾಟೆಗೆ ಕಾರಣವಾಯಿತು. ಸಚಿವ ಅಶ್ವಥ್ ನಾರಾಯಣ ಭಾಷಣದ ವೇಳೆ ಸಂಸದ ಡಿ.ಕೆ ಸುರೇಶ್‌ರವರಿಗೆ ಏಕವಚನದಲ್ಲಿ ಮಾತನಾಡಿ ಸಂಸದರಿಗೆ ಗೌರವ ನೀಡಿಲ್ಲ ಎಂಬ ಆರೋಪದ ಅಡಿ ಗಲಾಟೆ ಶುರುವಾಗಿದ್ದು ಇವರ ವಾಗ್ವದಕ್ಕೆ ಸಿ.ಎಂ ಬಸವರಾಜ ಬೊಮ್ಮಾಯಿ ಸಾಕ್ಷಿಯಾದರು.