ನೀಟ್ ( NEET) ಪಿಜಿ ಪರೀಕ್ಷೆಯ ಎರಡು ವಿಷಯದಲ್ಲಿ ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ತಾಲ್ಲೂಕಿನ ಡಾ.ಚಿದಾನಂದ ಕಲ್ಲಪ್ಪ ಕುಂಬಾರ (Dr, Chidananda Kallappa Kumbara) ದೇಶಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 2021-2022ನೇ ಸಾಲಿನ ನೀಟ್ ಪಿಜಿ ಪರೀಕ್ಷೆಯಲ್ಲಿ 759 ಅಂಕಗಳಿಸಿದ್ದಾರೆ. ಡಾ.ಚಿದಾನಂದ ಕಲ್ಲಪ್ಪ ಕುಂಬಾರ ಹುಬ್ಬಳ್ಳಿ ಕಿಮ್ಸ್ನಲ್ಲಿ ಎಮ್ಬಿಬಿಎಸ್ (MBBS) ಮುಗಿಸಿದ್ದರು. ಒಂದು ವರ್ಷದ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ನಲ್ಲಿ ಎಂಡಿ (MD) ಮುಗಸಿದ್ದಾರೆ. ಸೂಪರ್ ಸ್ಪೆಷಾಲಿಟಿ (Super Specialty) ನೀಟ್ ಪರೀಕ್ಷೆಯಲ್ಲಿ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಈ ವಿಚಾರ ತಿಳಿದ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಡೈಜೆಸ್ಟಿವ್ ಸಿಸ್ಟಮ್ ಸ್ಪೆಷಲಿಸ್ಟ್ (Digestive System Specialist) ವಿಷಯದಲ್ಲಿ 400ಕ್ಕೆ 340 ಅಂಕ ಪಡೆದಿದ್ದು, ಡಿಎಮ್ ಹೆಪೊಟಾಲಜಿ (ಲಿವರ್ ಸ್ಪೆಷಲಿಸ್ಟ್) 400 ಕ್ಕೆ 330 ಅಂಕ ಪಡೆದಿದ್ದಾರೆ. ಈ ಸಾಧನೆಯನ್ನು ನಮ್ಮ ಬಾಗಲಕೋಟೆಯ ವೈದ್ಯ ಮಾಡಿರುವುದು ಇಡೀ ಕರುನಾಡಿಗೆ ಸಂತಸ ಮೂಡಿಸಿದೆ.
ಜನವರಿ 10, 2022ರಲ್ಲಿ ಸೂಪರ್ ಸ್ಪೆಷಾಲಿಟಿ ನೀಟ್ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯ ಫಲಿತಾಂಶ ಜನವರಿ 31 ರಂದು ರಾತ್ರಿ ಬಂದಿದೆ. ಸದ್ಯ ಹೈದರಾಬಾದ್ ಗ್ಲೋಬಲ್ ಆಸ್ಪತ್ರೆಯಲ್ಲಿ ವೈದ್ಯ ಡಾ, ಚಿದಾನಂದ ಸೇವೆ ಸಲ್ಲಿಸುತ್ತಿದ್ದಾರೆ. ನಾನೊಬ್ಬ ರೈತನ ಮಗ ಅಂತ ಹೇಳಿಕೊಳ್ಳಲು ತುಂಬಾ ಹೆಮ್ಮೆಯಿದೆ. ನನ್ನ ತಂದೆ ಸಹಕಾರ, ಕುಟುಂಬಸ್ಥರ ಪ್ರೋತ್ಸಾಹದಿಂದ ನಾನು ವೈದ್ಯಕೀಯ ಕ್ಷೇತ್ರಕ್ಕೆ ಬಂದು ಇಂತಹ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು. ಇನ್ನು ನಮ್ಮ ಕ್ಷೇತ್ರದ ಶಾಸಕರು, ಸದ್ಯ ಸಚಿವರು ಆದ ಗೋವಿಂದ ಕಾರಜೋಳ ಅವರು ಕೂಡ ಎಂಬಿಬಿಎಸ್ ಓದುವಾಗ ಪ್ರೋತ್ಸಾಹ ನೀಡಿದ್ದು, ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಡಾ. ಚಿದಾನಂದ ಕುಂಬಾರ ಹೇಳಿದ್ದಾರೆ. ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡಿದ್ದ ಡಾ.ಚಿದಾನಂದ ತಂದೆಯ ಆಶ್ರಯದಲ್ಲೇ ಬೆಳೆದು ದೊಡ್ಡ ಸಾಧನೆ ಮಾಡಿದ್ದಾರೆ.. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ರನ್ನ ಬೆಳಗಲಿ ಗ್ರಾಮದಲ್ಲಿ ಮುಗಿಸಿ, ವಿಜಯಪುರ ಬಿಎಲ್ಡಿಇ ಕಾಲೇಜಿನಲ್ಲಿ ಪಿಯುಸಿ ಸೈನ್ಸ್ ಮಾಡಿದ್ದಾರೆ. ಕನ್ನಡ ಮಾಧ್ಯಮದಲ್ಲೇ ಕಲಿತು ಇಂದು ಕರುನಾಡಿಗೆ ಕೀರ್ತಿ ತಂದಿದ್ದಾರೆ.
KARNATAKAದ ಡಾ.ಚಿದಾನಂದ ಕಲ್ಲಪ್ಪ ಕುಂಬಾರ ನೀಟ್ ಪಿಜಿ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಸ್ಥಾನ..!
- Advertisement -
- Advertisement -