- Advertisement -
Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ರಕ್ತದಲ್ಲಿ ಪತ್ರ ಬರೆದು ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಲಾಗಿದೆ.
ತುಮಕೂರಿನಲ್ಲಿಂದು ದಲಿತ ಸಂಘಟನೆಗಳು ಅಂಬೇಡ್ಕರ್ ಪುತ್ಥಳಿ ಪ್ರತಿಭಟನೆ ನಡೆಸಿ, ದಲಿತ ಸಚಿವರಿಗೆ ಸಿಎಂ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ. ಟೌಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಡಾ ಜಿ ಪರಮೇಶ್ವರ್ ಗೆ ಸಿಎಂ ಸ್ಥಾನ ನೀಡಿ ದಲಿತ ಸಮಾಜಕ್ಕೆ ನ್ಯಾಯ ಒದಗಿಸುವಂತೆ ಬೇಡಿಕೆ ಇರಿಸಿದ್ದಾರೆ.
ಪರಮೇಶ್ವರ್ ಅವರು ಎರಡು ಬಾರಿ ಕೆಪಿಸಿಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಅವರಿಗೇ ಸಿಎಂ ಸ್ಥಾನ ನೀಡಬೇಕು ಎಂದು ಸಾಮೂಹಿಕವಾಗಿ ರಕ್ತದಲ್ಲಿ ಪತ್ರ ಬರೆದು ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
- Advertisement -

