- Advertisement -
Hubli: ಹುಬ್ಬಳ್ಳಿ-ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮತ್ತೆ ಹತ್ತು ದಿನದಲ್ಲೇ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದು, ಧಾರವಾಡ ವಿಭಾಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ ಬೆನ್ನಲ್ಲೇ, ಸದ್ಯ ಅವರು ಅಧಿಕಾರವನ್ನು ವಹಿಸಿಕೊಂಡಿದ್ದಾರೆ.
ಅಧಿಕಾರ ವಹಿಸಿಕೊಳ್ಳುಲು ಕಚೇರಿಗೆ ಆಗಮಿಸುತ್ತಿದ್ದಂತೆ ಕಚೇರಿಯ ಸಿಬ್ಬಂದಿ, ಅಧಿಕಾರಿಗಳು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಈಶ್ವರ ಉಳ್ಳಾಗಡ್ಡಿ ಸಭೆ ನಡೆಸಿದರು.
- Advertisement -