Tuesday, April 15, 2025

Latest Posts

Dr. K. Sudhakar : ರಾಜ್ಯದಲ್ಲಿ ಇಂದು ಕೊರೋನಾ ತ್ರಿಬಲ್

- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವೇ ( Coronavirus Case ) ಉಂಟಾಗಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4,246 ಜನರಿಗೆ ಕೊರೋನಾ ಪಾಸಿಟಿವ್ ( Corona Positive ) ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,27,328 ಜನರಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗಿದೆ.

ಇವರಲ್ಲಿ ಬೆಂಗಳೂರಿನಲ್ಲಿ 3,605 ಸೇರಿದಂತೆ ರಾಜ್ಯಾಧ್ಯಂತ 4246 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ 4246 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.3.33ರಷ್ಟು ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಬ್ಬರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇದುವರೆಗೆ 226 ಜನರಿಗೆ ಒಮಿಕ್ರಾನ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

- Advertisement -

Latest Posts

Don't Miss