ಆರೋಗ್ಯ ಇಲಾಖೆಯಿಂದ ವಿಶ್ವ ಅಂಗಾಂಗ ದಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ಪ್ರಯುಕ್ತ ವಿಶೇಷ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸುಧಾಕರ್ ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ,ಕೆ ಸುಧಾಕರ್ ಜನರಲ್ಲಿ ಅಂಗಾಂಗ ದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಅಂಗದಾನ ದಿನದ ಸಂದರ್ಭದಲ್ಲಿ ಆರೋಗ್ಯ ಸಚಿವ ಕೆ ಸುಧಾಕರ್ ವಿಶ್ವ ಅಂಗಾಂಗ ದಾನದ ಪ್ರತಿಜ್ಞೆಯನ್ನು ತೆಗೆದುಕೊಳ್ಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. “ಈ ಆಜಾದಿ ಕಿ ಅಮೃತ್ ಮಹೋತ್ಸವದ ಸಂದರ್ಭದಲ್ಲಿ ಯಾರೊಬ್ಬರ ಜೀವನಕ್ಕಾಗಿ “ಅಮೃತ” ಆಗಿರುವ ನಿಮ್ಮ ಅಂಗಗಳನ್ನು ದಾನ ಮಾಡಲು ಪ್ರತಿಜ್ಞೆ ಮಾಡಿ. ಸಿಎಂ ಬೊಮ್ಮಾಯಿ ಅವರು ಅಂಗಾಂಗ ದಾನದ ಪ್ರತಿಜ್ಞೆಯನ್ನೂ ಮಾಡಲಿದ್ದಾರೆ. ಅವರೊಂದಿಗೆ ನಾನೂ ಇತರ ಅಧಿಕಾರಿಗಳೊಂದಿಗೆ ಪ್ರತಿಜ್ಞೆ ಮಾಡುತ್ತೇನೆ ಎಂದು ಸಚಿವರು ಹೇಳಿದ್ದಾರೆ.