Sunday, April 13, 2025

Latest Posts

Dr. Ashwath Narayan : ಮಾರ್ಚ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಶಂಕುಸ್ಥಾಪನೆ..!

- Advertisement -

ರಾಮನಗರ ಜಿಲ್ಲಾ ಕ್ರೀಡಾಂಗಣ(Ramanagara District Stadium)ದಲ್ಲಿ 73ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಸಿ. ಎನ್ ಅಶ್ವಥ್ ನಾರಾಯಣ(Dr. Ashwath Narayan) ಪಾಲ್ಗೊಂಡು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು ಮಾರ್ಚ್ ತಿಂಗಳ ಮೊದಲವಾರದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ(Rajiv Gandhi Health University)ದಲ್ಲಿ ವೈದ್ಯಕೀಯ ಕಾಲೇಜು ಕ್ಯಾಂಪಸ್ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಮೂಲಕ ರಾಮನಗರವನ್ನು ಹೆಲ್ತ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಸಿ ಎನ್ ಅಶ್ವಥ್ ನಾರಾಯಣ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೇವಲ 250 ಹಾಸಿಗೆಗಳು ಹೊಂದಿದ್ದ ಜಿಲ್ಲಾಸ್ಪತ್ರೆಯ ಸಾಮರ್ಥ್ಯವನ್ನು 650 ಹಾಸಿಗೆಗಳಿಗೆ ಏರಿಸಲಾಗಿದ್ದು, ಇಲ್ಲಿಗೆ ಅಗತ್ಯವಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ. ರಾಮನಗರ ಜಿಲ್ಲೆಯ ರೈತರಿಗೆ 18 ಕೋಟಿ ರೂ ವಿನಿಯೋಗಿಸಿ ಕೃಷಿ ಉಪಕರಣಗಳನ್ನು ಕೊಡಲಾಗಿದೆ, ಹಾಗೆಯೇ ರೇಷ್ಮೆ ಬೆಳಗಾರರಿಗೆ 25 ಕೋಟಿ ರೂ ನೇರ ಅನುದಾನ ಒದಗಿಸಲಾಗಿದೆ. ಮುಂದಿನ ಸಂಪುಟ ಸಭೆಯಲ್ಲಿ ಚನ್ನಪಟ್ಟಣದಲ್ಲಿ 75 ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಿಸುವ ಯೋಜನೆ ಅನುಮೋದನೆ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ.

- Advertisement -

Latest Posts

Don't Miss