Friday, November 28, 2025

Latest Posts

ಮಾದಕ ವಸ್ತು ಮುಕ್ತ ಅವಳಿನಗರದ ಕನಸು: ಜಾಗೃತಿ ಅಭಿಯಾನಕ್ಕೆ ಜಿಲ್ಲಾಡಳಿತ ಸಜ್ಜು..!

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡವನ್ನು ಮಾದಕ ವಸ್ತು ಮುಕ್ತ ಅವಳಿನಗರವನ್ನಾಗಿ ಮಾಡಲು ಧಾರವಾಡ ಜಿಲ್ಲಾಡಳಿತವು ಪೊಲೀಸ್ ಕಮೀಷನರೇಟ್ ಹಾಗೂ ಪಾಲಿಕೆಯ ಸಹಭಾಗಿತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ನಿರ್ಧಾರ ಮಾಡಿದ್ದು, ವ್ಯಸನಮುಕ್ತ ಅವಳಿನಗರ ಮಾಡಲು ಜಿಲ್ಲಾಡಳಿತ ನಿರ್ಧಾರ ಮಾಡಿದ್ದಾರೆ.

ಈಗಾಗಲೇ ಪೊಲೀಸ್ ಇಲಾಖೆಯಿಂದ ಗಾಂಜಾ, ಡ್ರಗ್ ಹಾವಳಿ ತಪ್ಪಿಸಲು ಸ್ಪೆಷಲ್‌ ಡ್ರೈವ್ ಕೂಡ ಮಾಡಲಾಗಿದ್ದು, ಈಗ ಜಿಲ್ಲಾಡಳಿತದ ನಿರ್ದೇಶನದಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾದಕ ವಸ್ತುಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ‌ಅವಳಿನಗರವನ್ನು ಮಾದಕ ವಸ್ತುಗಳ ಬಳಕೆಯಿಂದ ದೂರ ಉಳಿಯುವಂತೆ ಮಾಡುವ ಬಹುದೊಡ್ಡ ಕನಸನ್ನು ಕಟ್ಟಿಕೊಂಡ‌ ಜಿಲ್ಲಾಡಳಿತ ಪೊಲೀಸ್ ಇಲಾಖೆ, ಪಾಲಿಕೆಯ ಸಹಭಾಗಿತ್ವದಲ್ಲಿ ಬಹುದೊಡ್ಡ ಜಾಗೃತಿ ಅಭಿಯಾನ ಮಾಡುವ ಮೂಲಕ ಜನರಲ್ಲಿ ಅರಿವು ಮೂಡಿಸಲು ಮುಂದಾಗಿದೆ.

ಇನ್ನೂ ಮಾದಕ ವಸ್ತುಗಳನ್ನು ಮಾರುವವರ ಜೊತೆಗೆ ಸೇವಿಸುವವರ ಮೇಲೂ ಪ್ರಕರಣ ದಾಖಲಿಸಲಾಗುತ್ತಿದೆ. ಇದರಲ್ಲಿ 18-20 ವರ್ಷದ ವಿದ್ಯಾರ್ಥಿಗಳೇ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಬಗ್ಗೆ ಪಾಲಕರ ಜೊತೆಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಮಾದಕ ವಸ್ತುಗಳ ಮುಕ್ತ ಅವಳಿನಗರದ ಕನಸನ್ನು ಸಾಕಾರಗೊಳಿಸಲು ಮುಂದಾಗಿರುವುದು ವಿಶೇಷವಾಗಿದೆ.

ಸಂಗಮೇಶ್ ಸತ್ತಿಗೇರಿ ಕರ್ನಾಟಕ್ ಟಿವಿ ಹುಬ್ಬಳ್ಳಿ

- Advertisement -

Latest Posts

Don't Miss