10 ದಿನಕ್ಕೆ 1 ಬಾರಿ ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಪೂರೈಕೆಯೂ ಅಪರೂಪ: ಸಮಸ್ಯೆ ಬಗೆಹರಿಸಲು ಗ್ರಾಮಸ್ಥರ ಆಗ್ರಹ

Haveri News: ಹಾವೇರಿ: ಹಾನಗಲ್ ತಾಲೂಕಿನ ಶಿರಗೋಡ್ ಗ್ರಾಮದಲ್ಲಿ ಜನರು ಕುಡಿಯುವ ನೀರಿಗಾಗಿ ತತ್ವಾರ ಪಡುತ್ತಿದ್ದಾರೆ. ಇಲ್ಲಿ ವಾರಕ್ಕೆ 1 ಬಾರಿ ಅಥವಾ ಹತ್ತು ದಿನಕ್ಕೆ 1 ಬಾರಿ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಹೀಗಾದರೆ ನಾವು ಬದುಕುವುದು ಹೇಗೆ ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.

ಇನ್ನು ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಹೋಗಿ ನೀರಿನ ಸಮಸ್ಯೆ ಕೇಳಿದರೆ ಇವತ್ತು ಮಾಡುತ್ತೇವೆ ನಾಳೆ ಮಾಡುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವಿದ್ಯುತ್ ಸಮಸ್ಯೆ ಉಂಟಾದಾಗ ಸಂಬಂಧಪಟ್ಟಂತ ಲೈನಮನ ಗೆ ಕಾಲ್ ಮಾಡಿದರೆ ಸ್ವಿಚ್ ಆಫ್ ಅಥವಾ ಬ್ಯುಸಿ ಮಾಡಿಕೊಂಡು ಇರುತ್ತಾರೆ. ಇನ್ನು ಗ್ರಾಮ ಪಂಚಾಯಿತಿಯಲ್ಲಿರುವ ಕಸ ತುಂಬುವ ವಾಹನ ಮನೆ ಹತ್ತಿರ ಬಂದು ಕಸ ತುಂಬುವ ಬದಲು ಬೇಕಾಬಿಟ್ಟಿಯಾಗಿ ತಿರುಗಾಡಿ ಕಸ ತುಂಬದೆ ಹಾಗೆ ಹೋಗುತ್ತಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಇದಕ್ಕೆಲ್ಲ ಬೇಗ ಅಂತ್ಯ ಹಾಡಬೇಕೆಂದು ಆಗ್ರಹಿಸಿದ್ದಾರೆ.

ಕೂಡಲೇ ನಮ್ಮ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಮತ್ತು ವಿದ್ಯುತ್ನಿಂದ ಆಗುವ ಸಮಸ್ಯೆಗಳನ್ನು ಸಂಬಂಧಪಟ್ಟ ಉನ್ನತ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಮ್ಮ ಸಮಸ್ಯೆ ಬಗೆಹರಿಸ ಬೇಕೆಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

About The Author