Hassan News: ಹಾಸನ: ಚಾಲಕನ ನಿಯಂತ್ರಣ ತಪ್ಪಿ, ಶಾಲೆಯ ಕಾಂಪೌಂಡ್ ಮತ್ತು ಮನೆಗೆ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಬಸ್‌ನಲ್ಲಿದ್ದ ಓರ್ವ ಮೃತಪಟ್ಟಿದ್ದಾನೆ. ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ.
ಹಾಸನ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚನ್ನರಾಯಪಟ್ಟಣ ತಾಲೂಕಿನ, ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿಯಾಗಿದ್ದಾರೆ. ಬಸ್‌ನ ಆಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕೆ ಹೊಡೆದು, ಜೆಎಸ್ಎಸ್ ಶಾಲೆಯ ಕಾಂಪೌಂಡ್ಗೆ ಸಾರಿಗೆ ಬಸ್ ಡಿಕ್ಕಿಯಾಗಿದೆ.
ಬೆಂಗಳೂರಿಂದ ಧರ್ಮಸ್ಥಳಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ತೆರಳುತ್ತಿತ್ತು. ಗಾಯಾಳುಗಳಿಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಇನ್ನು ಜಮೀನಿನಲ್ಲಿದ್ದ ವಾಸದ ಮನೆಗೂ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಆ ಮನೆಯಲ್ಲಿದ್ದವರೆಲ್ಲರೂ ಪ್ರಾಮಾಪಾಯದಿಂದ ಪಾರಾಗಿದ್ದಾರೆ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್




