ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಬಳಿ ಚರ್ಚಿಸಲಾಗುವುದು : ಡಾ.ಕೆ.ಸುಧಾಕರ್‌

ಬೆಳಗಾವಿ: ಒಕ್ಕಲಿಗರು ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಅನೇಕ ಸಮುದಾಯಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಕಂದಾಯ ಸಚಿವರಾದ ಆರ್‌.ಅಶೋಕ್‌ ಅವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಬಳಿಕ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿ, ಕೃಷಿಯನ್ನೇ ಆಧಾರವಾಗಿಟ್ಟುಕೊಂಡು ಬದುಕುತ್ತಿರುವ ಒಕ್ಕಲಿಗರು ರಾಜ್ಯದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಅನ್ನದಾತರಾದ ಒಕ್ಕಲಿಗ ಸಮಾಜದವರು ನ್ಯಾಯಯುತವಾದ ಬೇಡಿಕೆಯನ್ನೇ ಇಟ್ಟಿದ್ದಾರೆ ಎಂದರು. ಮಂಡ್ಯದಳ್ಳಿ ಪಂಚರತ್ನ ರಥಯಾತ್ರೆಗೆ … Continue reading ಒಕ್ಕಲಿಗರ ಮೀಸಲಾತಿ ಹೆಚ್ಚಳದ ಬಗ್ಗೆ ಸಿಎಂ ಬಳಿ ಚರ್ಚಿಸಲಾಗುವುದು : ಡಾ.ಕೆ.ಸುಧಾಕರ್‌