ಬೀದರ್: ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಿದರು.
ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು ಹುಲಸೂರು ತಹಸಿಲ್ದಾರರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪ್ರತಿ ವರ್ಷ ಅತಿವೃಷ್ಟಿ, ಅನಾವೃಷ್ಟಿ ಸೇರಿ ಹಲವು ಸಮಸ್ಯೆಗಳು ಎದುರಿಸಿ ಸಾಲದ ಸುಳಿಯಲ್ಲಿ ಸಿಲುಕಿದ್ದಾನೆ ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬಬೇಕು ಹಾಗೂ ರೈತರ ಜಮೀನುಗಳಿಗೆ 8 ಗಂಟೆಗಳ ಕಾಲ ವಿದ್ಯುತ್ ಪೂರೈಸಬೇಕುಮತ್ತು ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳ ಕಾಟ ಜಾಸ್ತಿಯಾಗಿದ್ಧು ಕೂಡಲೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರಸ್ತೆ ತಡೆದು ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ಧಾರೆ.
Pragenent Women: ಹೆರಿಗೆ ನೋವಿನಲ್ಲಿಯೂ ಸಭೆಗೆ ಬಂದ ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ…!
Opposition party: ಸಭೆಗೂ ಮುನ್ನವೇ ಆಡಳಿತ ಪಕ್ಷ, ಪ್ರತಿಪಕ್ಷದ ಜಟಾಪಟಿ..!
Bendre: ಬೇಂದ್ರೆ ಜನ್ಮ ದಿನವನ್ನು ವಿಶ್ವ ಕವಿ ದಿನವನ್ನಾಗಿ ಆಚರಿಸಲು ಸರ್ಕಾರಕ್ಕೆ ಮನವಿ