Thursday, February 6, 2025

Latest Posts

ಬರ ಹಿನ್ನೆಲೆ: ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮಕ್ಕೆ ಸಚಿವ ಸಂತೋಷ್‌ ಲಾಡ್‌ ಸೂಚನೆ

- Advertisement -

Dharwad News: ಧಾರವಾಡ: ಬರ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯಿತಿಯ ಸಮ್ಮೇಳನಾ ಸಭಾಂಗಣದಲ್ಲಿ ಶುಕ್ರವಾರ ನಡೆದ, ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಬರ ಸಂಬಂಧ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಇನ್ನಿತರ ಸಮಸ್ಯೆಗಳ ಪರಿಹರಿಸುವ ತುರ್ತು ಅಗತ್ಯದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಬಾರಿ ಜಿಲ್ಲೆಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮಳೆ ಕೊರತೆಯಿಂದ ಆಗುವ ಸಮಸ್ಯೆಗಳನ್ನು ಜನರು ಎದುರಿಸುವುದು ಬೇಡ. ಕುಡಿಯುವ ನೀರು ಆಥವಾ ಇನ್ಯಾವುದೇ ತೊಂದರೆಗಳು ಆಗದಂತೆ ಅಧಿಕಾರಿಗಳು ಮುನ್ನಚ್ಚರಿಕೆ ವಹಿಸಬೇಕು ಎಂದರು.

ಅಧಿಕಾರಿಗಳಿಗೆ ಸಚಿವರ ತರಾಟೆ
—————————-
ಸಭೆಯಲ್ಲಿ ಸಚಿವರು, ಜಿಲ್ಲೆಯಲ್ಲಿ ಜೆಜೆಎಂ ಸೇರಿದಂತೆ ವಿವಿಧ ಯೋಜನೆಗಳಡಿ, ಕುಡಿಯುವ ನೀರಿಗೆ ಸಂಬಂಧಿಸಿದಂತೆ, ಗ್ರಾಮೀಣಾಭಿವೃದ್ಧಿ ಮತ್ತು ಇಂಧನ ಇಲಾಖೆಗಳ ಅಧಿಕಾರಿಗಳನ್ನು ತೀವ್ರ ತರಾಟೆ ತೆಗೆದುಕೊಂಡ ಪ್ರಸಂಗವೂ ನಡೆಯಿತು.

ಜಿಲ್ಲೆಯಲ್ಲಿ ಕೆಲವೊಂದು ಕಡೆ ಬೋರ್‌ವೆಲ್‌ ಕೊರೆಯಿಸಿ ಆರು ತಿಂಗಳಾಗಿವೆ. ಇನ್ನೂ ಕೆಲವೆಡೆ ಎರಡ್ಮೂರು ವರ್ಷಗಳೇ ಆಗಿವೆ. ಆದರೂ ಇನ್ನೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಈ ಬಗ್ಗೆ ಸಾಕಷ್ಟು ಸಾಕಷ್ಟು ದೂರುಗಳು ಬಂದಿವೆ. ಬೋರ್‌ ವೆಲ್‌ಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ; ಹೀಗಾದರೆ ಜನರ ಸ್ಥಿತಿಯೇನು? ಇದಕ್ಕೆ, ಇಲಾಖೆಗಳ ನಡುವಿನ ಹೊಂದಾಣಿಕೆ ಕೊರೆತೆಯೇ ಅಥವಾ ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವೇ? ಎಂದು ಸಚಿವರು ಪ್ರಶ್ನಿಸಿ, ಮುಂದೆ ಹೀಗಾದರೆ ಸಹಿಸುವುದಿಲ್ಲ. ಕೂಡಲೇ ಕೊರೆದಿರುವ ಎಲ್ಲಾ ಬೋರ್‌ವೆಲ್‌ಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ; ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಸೂಚಿಸಿದರು.

ಈ ಬಾರಿ ಮಳೆ ಕೊರತೆಯಿಂದಾಗಿ ಮೇವಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಗ್ರಾಮೀಣ ಭಾಗದಲ್ಲಿ ಮೇವಿನ ಕೊರತೆ ಆಗದಂತೆ ಹೆಚ್ವಿನ ಮುತುವರ್ಜಿ ವಹಿಸಬೇಕು ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೆ. ಸ್ವರೂಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

‘ಅನ್ನಭಾಗ್ಯ ಅಂತೀರಿ.. ನನಗೆ ರೇಷನ್ ಕಾರ್ಡೇ ಮಾಡಿ ಕೊಡ್ತಿಲ್ಲ.. ಏನ್ ಸ್ವಾಮಿ ಇದು?’

ಡಿಸಿಎಂ ಡಿಕೆಶಿ ಸಿಬಿಐ ತನಿಖೆ ಹಿಂಪಡೆದ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದೇನು..?

‘ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತೆ’

- Advertisement -

Latest Posts

Don't Miss