National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ ಚಾನೆಲ್‌ಗಳಲ್ಲಿ ಹಿಂದಿಯಲ್ಲಿ ಪ್ರಸಾರ ಮಾಡಲಾಗುತ್ತದೆ. ಬಳಿಕ ಇಂಗ್ಲಿಷ್ ಆವೃತ್ತಿಯನ್ನು ಸಹ ಪ್ರಸಾರ ಮಾಡಲಾಗುವುದು ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.
ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪ್ರಸಾರವಾಗುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣವನ್ನು ದೂರದರ್ಶನದ ಪ್ರಾದೇಶಿಕ ಚಾನೆಲ್‌ಗಳು ಪ್ರಾದೇಶಿಕ ಭಾಷೆಗಳಲ್ಲಿ ಪ್ರಸಾರ ಮಾಡುತ್ತವೆ. ಆಕಾಶವಾಣಿಯು ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ರಾತ್ರಿ 9:30 ಗಂಟೆಗೆ ಅದರ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡುತ್ತದೆ ಎಂದು ಹೇಳಲಾಗಿದೆ.
Amith Shah : ‘ದೇಶವನ್ನು ಭದ್ರಪಡಿಸಲು ಸುರಕ್ಷಿತ ಗಡಿ’ : ಮೋದಿ ಕನಸನ್ನು ಉದ್ಘಾಟಿಸಿದ ಅಮಿತ್ ಶಾ….!