BENGALURU : ದಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿ ಅಂತ ರಾಜ್ಯ ಬಿಜೆಪಿ ಸಂಸದರಿಗೆ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ.
ರಾಜ್ಯದಲ್ಲಿ ಸದ್ಯ ಈಗ ಮೆಟ್ರೋ ಪ್ರಯಾಣದ ದರ ಏರಿಕೆಯಿಂದಾಗಿ ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬೆಂಗಳೂರಿನ ಮೆಟ್ರೋ ದರ ಏರಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
ಇನ್ನು ಬೆಲೆ ಏರಿಕೆಯ ವಿಚಾರವಾಗಿ ಬಿಜೆಪಿ ಯವರು ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡ್ತಿದ್ದಾರೆ ಜೊತೆಗೆ ಹೋರಾಟಗಳನ್ನು ಸಹ ಮಾಡ್ತಿದ್ದಾರೆ. ಆದರೆ ಈಗ ಇದಕ್ಕೆಲ್ಲ ತಕ್ಕ ಉತ್ತರ ಎಂಬಂತೆ ಪ್ರಿಯಾಂಕ್ ಖರ್ಗೆ ಉತ್ತರ ಕೊಡುವ ಕೆಲಸ ಮಾಡಿದ್ದಾರೆ
ಈ ಪ್ರಯಾಣ ದರ ಏರಿಕೆ ನಿರ್ಧಾರ ತೆಗೆದುಕೊಂಡಿರುವುದು ಕೇಂದ್ರ ಸರ್ಕಾರ ಹೀಗಾಗಿ ಕೇಂದ್ರ ಸರ್ಕಾರದ ವಿರುದ್ದ ಈಗ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶವನ್ನ ಹೊರಹಾಕಿದ್ದಾರೆ. ನಮ್ಮ ಮೆಟ್ರೋ ದರ ಏಕಾಏಕಿ ಶೇ. 50ರಷ್ಟು ಹೆಚ್ಚು ಮಾಡಿರುವುದು ನಮ್ಮ ಸರ್ಕಾರ ಅಲ್ಲ ಕೇಂದ್ರ ಬಿಜೆಪಿ ಸರ್ಕಾರ ಇದು ಸರಿಯಲ್ಲ ಇದು ಜನರಿಗೆ ಹೊರೆಯಾಗಲಿದೆ ಎಂದಿದ್ದಾರೆ.
ಮೊದಲನೆಯದಾಗಿ ಮೇಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರ ಹೊಣೆಯಲ್ಲ ಅಂತ ಸಮರ್ಥನೆ ಮಾಡಿಕೊಂಡಿದ್ದಾರೆ . ದರ ನಿಗಿದಿ ಕಮಿಟಿಯನ್ನ ಮಾಡಿದ್ದು ಕೇಂದ್ರ ಸರ್ಕಾರ. ನಾವು ಬಸ್ ಪ್ರಯಾಣ ದರ ಏರಿಕೆ ಮಾಡಿದಾಗ ಇದೇ ಬಿಜೆಪಿ ನಾಯಕರು ಗುಲಾಬಿ ಹೂ ಹಿಡಿದುಕೊಂಡು ಬಸ್ ನಿಲ್ದಾಣಕ್ಕೆ ಹೋಗಿ ಜನರ ಬಳಿ ಕ್ಷಮೆ ಕೇಳಿದ್ದರು. ಬಿಜೆಪಿಯವರು ಈಗ ಪ್ರಧಾನಿ ಮೋದಿ ಪರವಾಗಿ ಕ್ಷಮೆ ಕೇಳಲಿ. ಮೆಟ್ರೋ ಸ್ಟೇಷನ್ ಗೆ ಹೋಗಿ ಕ್ಷಮೆ ಕೇಳಲಿ. ಬೇಕಾದರೆ ನಾವೇ ಬಿಜೆಪಿಯವರಿಗೆ ಗುಲಾಬಿ ಹೂ ಕೊಡುತ್ತೇವೆ. ಮೋದಿ ಪರ ಗುಲಾಬಿ ಕೊಟ್ಟು ಕ್ಷಮೆ ಕೇಳ ಅಂತ ವ್ಯಂಗ್ಯವಾಡಿದ್ದಾರೆ.
ಮುಖ್ಯವಾಗಿ ನಮ್ಮ ಮೆಟ್ರೋ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿದೆ. ಈ ಹಿಂದೆ ಮೆಟ್ರೋ ದರ ಏರಿಕೆ ಮಾಡಲ್ಲ ಎಂದಾಗ ಇದೇ ಬಿಜೆಪಿ ಸಂಸದರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ್ದರು. ಆದರೆ ಈಗ ದರ ಏರಿಕೆ ಮಾಡಿದಾಗ ನಾವು ಜವಾಬ್ದಾರಿಯಾ? ಅಂತ ಪ್ರಶ್ನೆ ಮಾಡಿದ್ದಾರೆ
ಈ ವಿಷಯದ ಕುರಿತು ರಾಜ್ಯದ ಬಿಜೆಪಿ ಸಂಸದರಿಗೆ ದಮ್ ಇದ್ದರೆ ಮೆಟ್ರೋ ದರ ಕಡಿಮೆ ಮಾಡಲಿ. ಅದು ಬಿಟ್ಟು ಹೆಚ್ಚು ಮಾಡಿದಾಗ ರಾಜ್ಯ ಸರ್ಕಾರದ ಮೇಲೆ ಗೂಬೆ ಕೂರಿಸೊದು ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ ಪ್ರಿಯಾಂಕ್ ಖರ್ಗೆ.