ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು.

ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು.

ಸಿಂಗರ್ ಕಂಬದ ರಂಗಯ್ಯ ತಂಡದಿಂದ ಸಂಗೀತ ರಸಸಂಜೆ ಕಾರ್ಯಕ್ರಮಕ್ಕೆ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಚಾಲನೆ ನೀಡಿದ್ರು. ಕಾರ್ಯಕ್ರಮದಲ್ಲಿ ಪುನಿತ್ ರಾಜ್‌ಕುಮಾರ್ ಅಭಿನಯ ಬೊಂಬೆ ಹೇಳುತೈತೆ ಹಾಡು, ಎಲ್ಲರನ್ನೂ ಮಂತ್ರಮುಗ್ದಗೊಳಿಸಿತ್ತು. ಗೃಹ ಸಚಿವ ಪರಮೇಶ್ವರ್ ಕೂಡ ಈ ಹಾಡಿಗೆ ದನಿಗೂಡಿಸಿದ್ದು ವಿಶೇಷ. ಕಾರ್ಯಕ್ರಮದಲ್ಲಿ ಕನ್ನಿಕಾ ಪರಮೇಶ್ವರ್, ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ, ಶಾಸಕರಾದ ಜ್ಯೋತಿ ಗಣೇಶ್, ಹೆಚ್.ವಿ. ವೆಂಕಟೇಶ್, ಐಜಿಪಿ ಲಾಬೂರಾಮ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಓ ಪ್ರಭು, ಪಾಲಿಕೆ ಆಯುಕ್ತೆ ಅಶ್ವಿಜಾ, ಎಸ್‌ಪಿ ಅಶೋಕ್ ಭಾಗಿಯಾಗಿದ್ದರು.

