Friday, November 22, 2024

Latest Posts

ದ್ವಾರಕೀಶ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಕಣ್ಣುಗಳನನ್ನು ದಾನ ಮಾಡಿ ಮಾದರಿಯಾಗಿದ್ದಾರೆ: ಸಿಎಂ

- Advertisement -

Movie News: ಸಿಎಂ ಸಿದ್ದರಾಮಯ್ಯ ಇಂದು ನಟ ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದರು. ಈ ಬಗ್ಗೆ ಮಾತನಾಡಿರುವ ಸಿಎಂ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಯನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಹಾಸ್ಯನಟನಾಗಿ ಮಾತ್ರವಲ್ಲ, ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದ್ದರು. ಡಾ|| ರಾಜ್ ಕುಮಾರ್ ಮತ್ತು ದ್ವಾರಕೀಶ್ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು ಎಂದರು.

ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ದ್ವಾರಕೀಶ್ ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಅವರೊಂದಿಗೆ ಚರ್ಚಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ.

ಕೆಲ ವರ್ಷಗಳ ಹಿಂದೆ ಅವರ ಧರ್ಮಪತ್ನಿಯವರು ಮೃತಪಟ್ಟ ದಿನವೇ ದ್ವಾರಕೀಶ್ ಅವರೂ ಮೃತಪಟ್ಟಿದ್ದಾರೆ. ಇಬ್ಬರ ಆತ್ಮಕ್ಕೂ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದ್ವಾರಕೀಶ್ ಅವರು ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಎರಡು ಕಣ್ಣುಗಳನ್ನು ದಾನಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಮಾತ್ರವಲ್ಲ ಕರುನಾಡು ಬಡವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಟ ದ್ವಾರಕೀಶ್ ಅವರ ಅಂತಿಮ ವಿಧಿ ವಿಧಾನ ಬ್ರಾಹ್ಮಣ ಸಂಪ್ರದಾಯದಂತೆ ನಡೆದಿದ್ದು, ದ್ವಾರಕೀಶ್ ಅವರ ಪುತ್ರ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಚಿತೆಗೆ ಅಗ್ನಿ ಸ್ಪರ್ಶವಾಗಿದ್ದು, ದ್ವಾರಕೀಶ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಮತದಾರರಿಗೆ ಹಂಚಲು ತಂದಿದ್ದ 18 ಕೋಟಿ ರೂಪಾಯಿ ವಶಕ್ಕೆ ಪಡೆದ ಚುನಾವಣಾಧಿಕಾರಿಗಳು

ಅವರು ಬಂದಿದ್ದು ಗೊತ್ತಾಗಲ್ಲ, ಹೋಗಿದ್ದು ಗೊತ್ತಾಗಲ್ಲ: ರಾಹುಲ್ ರಾಜ್ಯ ಪ್ರವಾಸದ ಬಗ್ಗೆ ಪ್ರಜ್ವಲ್ ಮಾತು

ಬರ್ತ್‌ಡೇ ಪಾರ್ಟಿಗಾಗಿ ಜೋಮೆಟೋ ಪರಿಚಯಿಸಿದೆ ಹೊಸ ಆರ್ಡರ್ ಫ್ಲೀಟ್

- Advertisement -

Latest Posts

Don't Miss