Hubli News: ಹುಬ್ಬಳ್ಳಿ; ಇತ್ತೀಚಿನ ದಿನಗಳಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ಸಾಕಷ್ಟು ಯೋಜನೆ ಮೂಲಕ ಸಮಾಜದ ಶಾಂತಿ ಕಾಪಾಡಲು ಶ್ರಮಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸರಿಂದ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಪೊಲೀಸ್ ಏರಿಯಾ ಡಾಮಿನೇಷನ್ ಕ್ರಮ ಕೈಗೊಳ್ಳಲಾಯ್ತು.
ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ 42 ರೌಡಿಶೀಟರ್ ಗಳು, 18 MOBಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಖಾಲಿ ಇರುವ ಲೇಔಟ್ ಗಳಲ್ಲಿ, ರಸ್ತೆಗಳಲ್ಲಿ ಕುಳಿತು ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ 70 ಜನರು, ಸೇರಿದಂತೆ 130 ಜನರನ್ನು ವಶಕ್ಕೆ ಪಡೆದು ಕೆಪಿ Act ಅಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಇಲಾಖೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಿದೆ.
ರಸ್ತೆಗಳಲ್ಲಿ ಕುಳಿತು ಮದ್ಯ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ 70 ಜನರು, ಸೇರಿದಂತೆ 130 ಜನರನ್ನು ವಶಕ್ಕೆ ಪಡೆದು ಕೆಪಿ Act ಅಡಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಇಲಾಖೆ ಬಿಸಿ ಮುಟ್ಟಿಸುವ ಕಾರ್ಯವನ್ನು ಮಾಡಿದೆ.
ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿದ್ದ 10 ಜನರ ವಿರುದ್ಧ COTPA Act ಅಡಿ ಪ್ರಕರಣ ದಾಖಲಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿದ 25 ಜನರ ವಿರುದ್ಧ MV Act ರಡಿ ಪ್ರಕರಣ ದಾಖಲಿಸಿದ್ದು, ಹೀಗೆ ಒಟ್ಟು 165 ಜನರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಸೂಕ್ತ ಎಚ್ಚರಿಕೆಯನ್ನೂ
ನೀಡಲಾಗಿದೆ.