ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ ಕಾರ್ಯಕರ್ತ ರಜತ್ ಉಳ್ಳಾಗಡ್ಡಿಮಠ ಧಾರವಾಡ ಜಿಲ್ಲೆಯ ಜನತೆಯಲ್ಲಿ ಒಂದು ತಿಂಗಳು ಮುಂಚಿತವಾಗಿಯೇ ಮನವಿ ಮಾಡಿದ್ದಾರೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ವಿಗ್ರಹಗಳನ್ನ ನಾವು ನೀವೆಲ್ಲರೂ ಸ್ವಯಂ ಪ್ರೇರಿತರಾಗಿ ತಿರಸ್ಕರಿಸಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಯನ್ನು ಕಡ್ಡಾಯವಾಗಿ ಬಳಸಬೇಕು, ಏಕೆಂದರೆ ಪಿಒಪಿ ಗಣೇಶ ಮೂರ್ತಿ ವಿಸರ್ಜನೆ ಮಾಡುವುದರಿಂದ ಕೆರೆಗಳು, ನದಿಗಳು ಮತ್ತು ಸಮುದ್ರದ ನೀರು ವಿಷಪೂರಿತವಾಗಿ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತದೆ. ಈ ವರ್ಷ ಮರುಬಳಕೆಯ ಕಾಗದ, ನೈಸರ್ಗಿಕ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶನನ್ನು ಮನೆಗೆ ತನ್ನಿ ಇತರ ನೈಸರ್ಗಿಕವಾಗಿ ಹಬ್ಬ ಆಚರಿಸಿ, ಈ ವರ್ಷ ಒಂದು ಬದಲಾವಣೆ ಆಗಲಿ ಎಂದು ರಜತ್ ಉಳ್ಳಾಗಡ್ಡಿಮಠ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಕೆರೆ ಬಾವಿಯಲ್ಲಿ ಕರಗದ ಗಣಪ
ನಾವು ಭಕ್ತಿಯಿಂದ ಪೂಜಿಸುವ ಗೌರಿ, ಗಣಪತಿಯ ಪಿಒಪಿ ವಿಗ್ರಹಗಳು ನೀರಲ್ಲಿ ಹತ್ತಾರು ದಿನ ಕಳೆದರೂ ಕರಗುವುದಿಲ್ಲ. ಅವುಗಳು ಕೆರೆ, ಕಟ್ಟೆಗಳ ಬಳಿ ಅರ್ಧ ಕರಗಿ, ಮುರಿದು ಬಿದ್ದಿರುವ ಸ್ಥಿತಿ ನೋಡಿದಾಗ ಮನಸ್ಸಿಗೆ ತುಂಬಾ ನೋವಾಗುತ್ತದೆ,ಕಳೆದ ವರ್ಷ ನಾವು ನಮ್ಮ ರಜತ್ ಉಳ್ಳಾಗಡ್ಡಿಮಠ ಪೌಂಡೇಶನ್ ವತಿಯಿಂದ ಹುಬ್ಬಳ್ಳಿಯ ಹಲವು ಬಾವಿಗಳಿಗೆ ಬೇಟಿ ನೀಡಿ ಇಲ್ಲಿ ಸಾಧ್ಯವಾದಷ್ಟು ಸಮಸ್ಯೆ ಬಗೆಹರಿಸಿದೇವು ವಿಸರ್ಜನೆಯಾದ ಪಿಒಪಿ ಗಣಪತಿ ನೋಡಿ ಮರಗುವ ಬದಲು ಮುಂಚಿತವಾಗಿ ನಮ್ಮ ನಿರ್ಧಾರ ಬದಲಿಸಿದರೆ ದೈವದ ಜೊತೆ ಪರಿಸರದ ಆರಾಧನೆ ಕೂಡ ನಡೆಯಲಿದೆ.
ಗಣೇಶ ಹಬ್ಬ ಆಚರಣೆ ಹೀಗೆ ಮಾಡಬಹುದು -ಗೌರಿ ಮತ್ತು ಗಣೇಶನ ಹಬ್ಬದ ವೇಳೆ ಮಾವಿನ ತೋರಣ ಕಟ್ಟಿ, ತೆಂಗಿನ ಗರಿಯಿಂದ ಮಂಟಪ ಮಾಡಿ, ಬಾಳೆ ಕಂದು ಕಟ್ಟಿ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ತಂದು, ಹೂ, ಪತ್ರೆಗಳಿಂದ ಪೂಜಿಸಿ, ನೀರಿನಲ್ಲಿ ವಿಸರ್ಜಿಸುವುದು ಹಿಂದಿನಿಂದಲೂ ನಡೆದು ಬಂದ ಸಂಪ್ರದಾಯ, ಇದನ್ನ ನಾವು ಮತ್ತೆ ಮುನ್ನಲೆಗೆ ತಂದರೆ ಒಳಿತಲ್ಲವೇ
ನಮ್ಮ ಪೂರ್ವಿಕರು ಕೆರೆಯಲ್ಲೇ ಸಿಗುವ ಜೇಡಿಮಣ್ಣಿನಲ್ಲಿ ಗೌರಿ, ಗಣಪತಿ ವಿಗ್ರಹ ಮಾಡಿ ಅದಕ್ಕೆ ನೈಸರ್ಗಿಕ ಬಣ್ಣ ಲೇಪಿಸಿ, ಪೂಜಿಸಿ, ನೀರಲ್ಲಿ ವಿಸರ್ಜಿಸುತ್ತಿದ್ದರು. ಆ ವಿಗ್ರಹಗಳು 2-3 ದಿನದಲ್ಲಿ ಕರಗುತ್ತಿದ್ದವು. ಆದರೆ ಕಳೆದ ಕೆಲವು ದಶಕದಿಂದ ಪಿಒಪಿ ಗಣಪತಿ ವಿಗ್ರಹ ಮಾಡುತ್ತಿದ್ದು, ಇದಕ್ಕೆ ರಾಸಾಯನಿಕ ಬಣ್ಣ ಲೇಪಿಸುತ್ತಾರೆ. ಈ ಬಣ್ಣಗಳಿಂದಾಗಿ ಜಲಚರಗಳು ಸಾವಿಗೀಡಾಗುತ್ತಿದ್ದು, ಈ ವಿಗ್ರಹಗಳು ನೀರಲ್ಲಿ ಕರಗುವುದೂ ಇಲ್ಲ. ಜಲ ಮೂಲಗಳನ್ನು ಕಲುಷಿತಗೊಳಿಸುತ್ತಿದೆ ಎಂದು ತಿಳಿಸಿದ್ದಾರೆ.
ಗಣಪತಿಯ ಮಂಟಪದ ಅಲಂಕಾರಕ್ಕೆ ಪ್ಲಾಸ್ಟಿಕ್ ತೋರಣ, ಪ್ಲಾಸ್ಟಿಕ್ ಅಲಂಕಾರಿಕ ವಸ್ತು ಬಳಸದೆ ಹತ್ತಿಯಿಂದ ಮಾಡಿದ ಸಾಂಪ್ರದಾಯಿಕ ಗೆಜ್ಜೆ, ವಸ್ತ್ರ ಬಳಸುವಂತೆ ಮತ್ತು ಪರಿಸರ ಉಳಿಸವಂತೆ ಅವರು ಮನವಿ ಮಾಡಿದ್ದಾರೆ.
Special pooja: ಚಂದ್ರಯಾದ ಯಶಸ್ವಿಗಾಗಿ ಸಿದ್ದಾರೂಢಾ ಸ್ವಾಮಿಗೆ ರುದ್ರಾಭಿಷೇಕ
Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!
Kaveri water : ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ..!