ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ‌ ಅಲ್ಲ, ಮುಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ: ಸಿಎಂ

Political News: ನಿನ್ನೆಯಷ್ಟೇ ಧಾರವಾಡದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇ.ಡಿ ನೊಟೀಸ್ ನೀಡಿದ್ದಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇ.ಡಿ ಅವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ, ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ‌ ಅಲ್ಲ, ಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತವಾಗಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಬಗ್ಗೆ ನನಗೆ ಆತಂಕವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

About The Author