Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ ಮಂಜುನಾನಾಥ್ ಗೌಡ ಅವರ ಮೇಲೆ ಪ್ರಕರಣ ದಾಖಲಾಗಿತ್ತು.
ದೂರಿನ ಆಧಾರದ ಮೇಲೆ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು. ಇಡಿ ಅಧಿಕಾರಿಗಳು ಇಂದು ಮೂರನೇ ಬಾರಿ ದಾಳಿ ನಡೆಸಿದ್ದಾರೆ. ಮಂಜುನಾಥ ಗೌಡ ಅವರ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಬಳಿಯ ಕರಕುಚ್ಚಿಯ ಮನೆ, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯ ಮನೆ, ಶಿವಮೊಗ್ಗದ ಶರಾವತಿ ನಗರದ ಸಂಬಂಧಿಕರ ಮನೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಾಳಿಯಲ್ಲಿ ದೆಹಲಿ ಹಾಗೂ ಗೋವಾದ ಸುಮಾರು 60 ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿಯ ವೇಳೆ ಕೇಂದ್ರ ಶಸ್ತ್ರಾಸ್ತ್ರ ಪಡೆ ಆರ್‌ಪಿಎಫ್ ಬಳಸಿಕೊಳ್ಳಲಾಗಿದೆ. ದಾಳಿಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಸ್ವಚ್ಚತಾ ಸಿಬ್ಬಂದಿಯ ಕಣ್ಣೀರ ಕಹಾನಿ: ಸಾಕ್ಷ್ಯಚಿತ್ರ ಸಾಕ್ಷಿಕರಿಸಿದ ಪೌರಕಾರ್ಮಿಕರ ನೋವು..!