Hubballi News : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.
ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ದಕ್ಕೆಯನ್ನುಂಟು ಮಾಡುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ಕೊಟ್ಟರೇ ಮಾಡುತ್ತೇವೆ. ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ತಿರುತ್ತೇವೆ ಎಂದು ಎಚ್ಚರಿಕೆ ನೀಡಿದರು.
Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ
Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ
Sports : ಕ್ರೀಡೆಯಲ್ಲಿ ಯಶಸ್ಸು ಪಡೆದು ದೇಶಕ್ಕೆ ಪ್ರತಿಭೆ ಪಸರಿಸುವ ಕಾರ್ಯ ಕೈಗೊಳ್ಳಬೇಕು : ಶಾಸಕ ಟಿ ರಘುಮೂರ್ತಿ