Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಅದೃಷ್ಟವಶಾತ್ ಸಚಿವರು ಸೇರಿ, ಕಾರ್ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು, ಪುನಃ ಬೆಂಗಳೂರಿಗೆ ಬರುವಾಗ, ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಘಟನೆ ಬಳಿಕ, ಕಾರ್ ಚೇಂಜ್ ಮಾಡಿಕೊಂಡು ಸಚಿವರು ಬೆಂಗಳೂರಿಗೆ ಬಂದಿಳಿದಿದ್ದಾರೆ. ಇನ್ನು ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




