Political News: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜಭವನಕ್ಕೆ ತೆರಳಿದ ಶಿಂಧೆ, ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಈ ವೇಳೆ ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ಮತ್ತು ದೇವೇಂದ್ರ ಫಡ್ನವೀಸ್ ಕೂಡ ಉಪಸ್ಥಿತರಿದ್ದರು.
ಶಿಂಧೆ ಅವರೊಂದಿಗೆ ಅವರ ಸಂಪುಟ ಸಚಿವರೆಲ್ಲರೂ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದ್ದು, ಎನ್‌ಸಿಪಿ ಮತ್ತು ಶಿವಸೇನೆ ಬಣದೊಂದಿಗೆ ಮೈತ್ರಿ ಮಾಡಿಕೊಂಡಿದೆ. ಮುಂದಿನ ಸಿಎಂ ದೇವೇಂದ್ರ ಫಡ್ನವೀಸ್ ಆಗಲಿದ್ದಾರೆಂದು ಅಂದಾಜಿಸಲಾಗಿದೆ. ಅಲ್ಲದೇ ಎನ್‌ಸಿಪಿ ಮತ್ತು ಶಿವಸೇನೆಯಿಂದ ತಲಾ ಒಬ್ಬೊಬ್ಬರು ಉಪಮುಖ್ಯಮಂತ್ರಿಯಾಗಲಿದ್ದಾರೆ.
ಆದರೆ ಶಿವಸೇನೆ ಬಣ, ಏಕನಾಥ್ ಶಿಂಧೆಯವರನ್ನೇ ಸಿಎಂ ಮಾಡಬೇಕು. ಉಳಿದಂತೆ ಮೊದಲಿನಂತೆ ಇಬ್ಬರು ಉಪಮುಖ್ಯಮಂತ್ರಿಯಾಗಬೇಕು ಎಂದು ಪಟ್ಟು ಹಿಡಿದಿದೆ. ಒಟ್ಟಾರೆಯಾಗಿ ಮಹಾರಾಷ್ಟ್ರದಲ್ಲಿ ಸಿಎಂ ಪಟ್ಟಕ್ಕಾಗಿ ಸ್ಪರ್ಧೆ ಏರ್ಪಟ್ಟಿದ್ದು, ಮುಂದಿನ ಸಿಎಂ ಯಾರಾಗ್ತಾರೆ ಎಂದು ಕಾದು ನೋಡಬೇಕಿದೆ.