ಬೆಳಗಾವಿ: ಕೋವಿಡ್ ನಿಂದಾಗಿ ಅವಧಿ ಮುಂಚಿತವಾಗಿ ಚುನಾವಣೆ ನಡೆಯಲಿದೆ ಹಾಗೂ ದೆಹಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ದೆಹಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುಂಚಿತವಾಗಿ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸಿದರು.
ಹೊಟೇಲ್ ಶೈಲಿಯಲ್ಲಿ ಮನೆಯಲ್ಲೇ ತಯಾರಿಸಿ ಕ್ಯಾಬೇಜ್ ಮಂಚೂರಿಯನ್..
ಕೋವಿಡ್ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್ ದೊಡ್ಡ ಪ್ರಮಾಣದಲ್ಲಿ ಹಾಗೂ ವಿವಿಧ ತಳಿಗಳಲ್ಲಿ ಬರುತ್ತಿದೆ. ಹೊಸ ತಳಿ ಕಂಡುಬಂದಿದ್ದು ವೇಗದಲ್ಲಿ ಹರುಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಇಂದು ಸಭೆಯನ್ನು ನಡೆಸಲಾಗುತ್ತಿದೆ. ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಅಧಿಕಾರಿಗಳು, ತಂಜ್ಞರ ಸಮಿತಿಯೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಕೋವಿಡ್ ನ್ನು ನಿಯಂತ್ರಿಸಲು ಹಾಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಬಗ್ಗೆ ಭಯ ಆತಂಕ ಪಡುವ ಅಗತ್ಯವಿಲ್ಲ. ತಜ್ಞರ ಸಲಹೆಗಳನ್ನು ಪರಿಪಾಲನೆ ಮಾಡುವ ಮೂಲಕ ಕೋವಿಡ್ ನ್ನು ಸಂಪೂರ್ಣ ನಿಯಂತ್ರಣ ಮಾಡಬಹುದು ಎಂದು ತಿಳಿಸಿದರು.
ಪಂಜಾಬ್‌ನಲ್ಲಿ ಪಾಕಿಸ್ತಾನದ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್ ಪಡೆ
ಪಂಚಮಸಾಲಿ ಮೀಸಲಾತಿ ಹೋರಾಟ: ಸಿಎಂ ಬೊಮ್ಮಾಯಿಗೆ ಮಧ್ಯಂತರ ವರದಿ ಸಲ್ಲಿಕೆ