Saturday, July 27, 2024

Latest Posts

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

- Advertisement -

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು.

ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್’ದೊಳಗೆ ಲೋಕಸಭಾ ಚುನಾವಣೆ ಮಾಡುವ ಸಂಭವವಿದ್ದು, ಅಷ್ಟರೊಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಲವು ದರಗಳನ್ನು ಇಳಿಸಬಹುದು ಹಾಗೂ ಸಾಧ್ಯವಾದರೇ ಉಚಿತ ಯೋಜನೆಗಳನ್ನು ಘೋಷಣೆ ಮಾಡಬಹುದು ಎಂದು ಲೇವಡಿ ಮಾಡಿದರು.

ಕೇಂದ್ರ ಸರ್ಕಾರ ಈಗಾಗಲೇ ಸಿಲಿಂಡರ್ ದರವನ್ನು ಸಾವಿರ ರೂಪಾಯಿ ಹೆಚ್ಚಿಸಿ, ಇದೀಗ ಕೇವಲ 200 ರೂಪಾಯಿ ಇಳಿಸಿದರೇ ಏನೂ ಉಪಯೋಗ, ಅವರಿಗೆ ಜನರ ಬಗ್ಗೆ ಕಾಳಜಿ ಇದ್ದರೆ ಕನಿಷ್ಠ 500 ರೂ ಇಳಿಸಬೇಕಿತ್ತು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಗ್ಯಾರಂಟಿಗಳ ಅನುಷ್ಠಾನದಿಂದ ಹತಾಷೆಗೊಂಡಿರುವ ಬಿಜೆಪಿ, ಇನ್ನಿಲ್ಲದ ಆರೋಪಗಳನ್ನು ಮಾಡುತ್ತಿದೆ. ರಾಜ್ಯದಲ್ಲಿ ಬಿಜೆಪಿ ಅದೋಗತಿಗೆ ಹೋಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ 15 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಗೆಲ್ಲಲಿದೆ ಎಂದು ಭವಿಷ್ಯ ನೀಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ ಪ್ರಣಾಳಿಕೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಅದರಂತೆ ಈಗಾಗಲೇ ಮೂರು ಯೋಜನೆ ಜಾರಿಯಾಗಿದ್ದು, ಇಂದು ನಾಲ್ಕನೇ ಯೋಜನೆ ಗೃಹಲಕ್ಷ್ಮಿಗೆ ಚಾಲನೆ ನೀಡಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಡವರು, ದೀನ ದಲಿತರು, ಮಧ್ಯಮ ವರ್ಗ ಸೇರಿದಂತೆ ಜನಸಾಮಾನ್ಯರಿಗೆ ಅನುಕೂಲವಾಗಿದೆ. ಈ ಮೂಲಕ ಹೊಸ ಮನ್ವಂತರಿಗೆ ನಾಂದಿ ಹಾಡಿದಂತಾಗಿದೆ ಎಂದರು.

Rahul Gandhi:ರಾಹುಲ್ ಗಾಂಧಿಗೆ ರಾಕಿ ಕಟ್ಟಲಿರುವ ಮಹಿಳೆಯರು..!

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

Cultural activites: ಸಂತೋಷ್ ಲಾಡ್ ಫೌಂಡೇಶನ್‌ನಿಂದ ಸಾಂಸ್ಕೃತಿಕ ಸಂಭ್ರಮ

- Advertisement -

Latest Posts

Don't Miss