ಬೆಂಗಳೂರು: ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ 1987 ಅಡಿಯಲ್ಲಿ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸೂಕ್ತ ನಿಯಮ ರೂಪಿಸುವಂತೆ ಹೈಕೋರ್ಟ್ ಆದೇಶಿಸಿದೆ. ವಿಪ್ ವಿಚಾರ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕಾಯಿದೆ ಇದ್ದರೂ ಅದಕ್ಕೆ ನಿಯಮಗಳನ್ನು ಸರ್ಕಾರ ರೂಪಿಸಿಲ್ಲ. ಹಾಗಾಗಿ ಕರ್ನಾಟಕ ಹೈಕೋರ್ಟ್ ವಿಪ್ ಉಲ್ಲಂಘನೆ ಮಾಡಿ ಸದಸ್ಯರು ಅನರ್ಹತೆಗೆ ಒಳಗಾಗುವುದನ್ನು ತಪ್ಪಿಸಿ, ಸೂಕ್ತ ನಿಯಮ ರೂಪಿಸಲು ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಈ ವಿಷಯಗಳು ಗೊತ್ತಾದರೆ ಸಾಸಿವೆ ಸೊಪ್ಪನ್ನು ನೀವು ಬಿಡುವುದಿಲ್ಲ..!
ಬಾಗಲಕೋಟೆ ಜಿಲ್ಲೆಯ ರಬಕವಿ ತಾಲೂಕಿನ ಮಹಾಲಿಂಗ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವಿಪ್ ಉಲ್ಲಂಘಿಸಿದ ಆರೋಪ ಸಂಬಂಧ ಸದಸ್ಯರ ಸ್ಥಾನದಿಂದ ತಮ್ಮನ್ನುಅನರ್ಹಗೊಳಿಸಿದ್ದಾರೆಂದು ಜಿಲ್ಲಾಧಿಕಾರಿಯ ಕ್ರಮ ಪ್ರಶ್ನಿಸಿ ಸವಿತಾ, ಚಾಂದಿನಿ ಮತ್ತು ಗೋದಾವರಿ ಸಲ್ಲಿಸಿದ್ದ ಅರ್ಜಿಗಳನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ಎಸ್. ಸಂಜಯ್ ಗೌಡ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.
ಜ್ಯೋತಿಷ್ಯದಲ್ಲಿ ನಿಂಬೆ ಹಣ್ಣಿನ ಪರಿಣಾಮಕಾರಿ ತಂತ್ರಗಳು..!
ಸ್ಥಳೀಯ ಸಂಸ್ಥೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ವೇಳೆ ಯಾರಿಗೆ ಮತ ಹಾಕಬೇಕು ಎಂಬ ಬಗ್ಗೆ ರಾಜಕೀಯ ಪಕ್ಷ ವಿಪ್ ತೆಗೆದುಕೊಳ್ಳಬೇಕು. ಅದನ್ನು ಚುನಾಯಿತ ಸದಸ್ಯರ ಸಭೆ ನಡೆಸುವ ಸಕ್ಷಮ ಅಧಿಕಾರಿಗೆ ರವಾನಿಸಬೇಕು. ಪಕ್ಷವು ತನ್ನ ತೀರ್ಮಾನವನ್ನು ಸಕ್ಷಮ ಅಧಿಕಾರಿಗೆ ಐದು ದಿನಗಳ ಮುನ್ನ ತಲುಪಿಸಬೇಕು. ಪಕ್ಷದ ತೀರ್ಮಾನವನ್ನು ಸಭೆ ನಡೆಸುವ 5 ದಿನಗಳ ಮುನ್ನ ಸಕ್ಷಮ ಅಧಿಕಾರಿಯು ಸ್ಥಳೀಯ ಸಂಸ್ಥೆಯ ತನ್ನ ಸದಸ್ಯರಿಗೆ ಕಳುಹಿಸಬೇಕು. ವಿಪ್ ನೋಟಿಸ್ ಅನ್ನು ಆರ್‌ಪಿಎಡಿ, ಕೊರಿಯರ್ ಅಥವಾ ಇ-ಮೇಲ್ ಮೂಲಕ ಕಳುಹಿಸುವುದು ರಾಜಕೀಯ ಪಕ್ಷಗಳಿಗೆ ಬಿಟ್ಟಿರುತ್ತದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಸಮಸ್ಯೆ ಏನೇ ಇರಲಿ..ದೇವರು ನಮ್ಮನ್ನು ಕಾಪಾಡಲು ಪ್ರಯತ್ನಿಸುತ್ತಾನೆ.. ಈ ಕಥೆ ಕೇಳಿದರೆ ನಿಮಗೇ ಅರ್ಥವಾಗುತ್ತದೆ…