www.karnatakatv.net : ಬೆಳಗಾವಿ : ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ ಸಮಿತಿ ಸದಸ್ಯರಾದ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ನಗರದ ಕಾಂಗ್ರೇಸ ಕಚೇರಿಯಲ್ಲಿ ಶಾಸಕರು, ಮಾಜಿ ಶಾಸಕರು, ಪಾಲಿಕೆ ಮಾಜಿ ಸದಸ್ಯರು, ಮುಖಂಡರ ಜೊತೆಗೆ ಸುದೀರ್ಘ ಎರಡು ಗಂಟೆಗಳ ಕಾಲ ಸಭೆ ನಡೆಸಲಾಯಿತು.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಮಹಾನಗರ ಪಾಲಿಕೆ ಚುನಾವಣೆ ಮಾಡುವುದರ ಬಗ್ಗೆ ಚರ್ಚೆ ನಡೆಯಿತು. ಈ ವಿಷಯಕ್ಕೆ ಪರ ವಿರೋಧ ಅಭಿಪ್ರಾಯ ವ್ಯಕ್ತವಾದವು. ಮಾಜಿ ಶಾಸಕರು, ಮುಖಂಡರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ಸಭೆ ಬಳಿಕ ಮಾಜಿ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.ರಾಜ್ಯದಲ್ಲಿನ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆ ಮೇಲೆ ನಡೆಸುವ ಬಗ್ಗೆ ಚರ್ಚೆ ನಡೆಸಲಾಯಿತು. ಈಗಾಗಲೇ ಪಾಲಿಕೆ ಚುನಾವಣೆ ಸ್ಪರ್ಧಿಸಲು 120 ಅರ್ಜಿಗಳು ಬಂದಿವೆ. ಆದರೆ ಕಾಂಗ್ರೆಸ್ ಪಕ್ಷದ ಚಿಹ್ನೆ ಮೇಲೆ ಚುನಾವಣೆ ನಡೆಸುವುದಕ್ಕೆ ಸಾಧಕ- ಬಾಧಕ ಚರ್ಚೆಯಾಗಿದೆ.
ಕಾಂಗ್ರೆಸ್ ಹಾಲಿ ಶಾಸಕರು, ಮಾಜಿ ಶಾಸಕರು, ಮಾಜಿ ಪಾಲಿಕೆ ಸದಸ್ಯರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇದಲ್ಲದೆ ರಾಷ್ಟ್ರ, ರಾಜ್ಯ ಮಟ್ಟದಲ್ಲಿ ಸರ್ಕಾರದ ವೈಫಲ್ಯ, ಪೆಟ್ರೋಲ್, ಡಿಸೇಲ್, ಗ್ಯಾಸ್, ದಿನಬಳಕೆ ವಸ್ತುಗಳ ಬೆಲೆ ಏರಿಕೆ, ಪೋನ್ ಕದ್ದಾಲಿ, ಆರ್ಥಿಕ ಮಟ್ಟ ಕುಸಿತ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚಿಸಿ , ಸರ್ಕಾರದ ವೈಫಲ್ಯವನ್ನು ಜನರಿಗೆ ಮುಂದಿಡುವ ಪ್ರಯತ್ನದ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ನಾಳೆ ಅಥವಾ ನಾಡಿದ್ದು ಕೆಪಿಸಿಸಿ ಅಧ್ಯಕ್ಷರ ಮುಂದಿಡಲಾಗುವುದು. ಆಗ ಪಕ್ಷ ಪಾಲಿಕೆ ಚಿಹ್ನೆ ಮೇಲೆ ನಡೆಸುವುದೋ, ಬೆಡವೋ ಎಂಬುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ,ನಾಸೀರ ಹುಷೇನ್ ಸಾಬ್, ವಿಧಾನಪರಿಷತ್ ಸದಸ್ಯ ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಶಾಸಕ ಪೀರೋಜ್ ಸೇಠ್, ವೀರಕುಮಾರ್ ಪಾಟೀಲ, ಎಸ್.ಬಿ.ಗಾಟಗೆ, ರಾಜು ಸೇಠ್, ರಾಜೇಂದ್ರ ಪಾಟೀಲ,ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಸುನೀಲ ಹನುಮನ್ನವರ, ಮಾಜಿ ಪಾಲಿಕೆ ಸದಸ್ಯರು, ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ