Thursday, December 26, 2024

Latest Posts

ವಿಧಾನಸಭೆ, ಪರಿಷತ್ ವಿಪಕ್ಷ ನಾಯಕರ ಆಯ್ಕೆ: ಬೆಂಗಳೂರಿಗೆ ಬಂದಿಳಿದ ಕೇಂದ್ರ ಬಿಜೆಪಿ ವೀಕ್ಷಕರು

- Advertisement -

Political News: ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿ ಸೈಲೆಂಟ್ ಆಗಿದ್ದ ಕರ್ನಾಟಕ ಬಿಜೆಪಿಯಲ್ಲಿ (Karnataka BJP) ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ (BY Vijayendra) ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ ಬೆನ್ನಲ್ಲೇ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆಗೆ ಮುಹೂರ್ತ ಕೂಡಿಬಂದಿದೆ.

ಕೆಳಮನೆ ಹಾಗೂ ಮೇಲ್ಮನೆಗೆ ವಿರೋಧ ಪಕ್ಷದ ನಾಯಕನನ್ನು (Opposition Leaders )ಆಯ್ಕೆ ಮಾಡುವ ಸಂಬಂಧ ಇಂದು(ನವೆಂಬರ್ 17) ಸಂಜೆ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ಶಾಸಕರ ಅಭಿಪ್ರಾಯಕ್ಕೆ ಕೇಂದ್ರ ಬಿಜೆಪಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಅವರು ಬೆಂಗಳೂರಿಗೆ ಬಂದಿಳಿದಿದ್ದಾರೆ.

ವೀಕ್ಷಕರನ್ನು ಬರಮಾಡಿಕೊಂಡ ವಿಜಯೇಂದ್ರ
ವಿಪಕ್ಷ ನಾಯಕ ಆಯ್ಕೆ ಮಾಡುವ ಸಂಬಂಧ ಶಾಸಕ ಅಭಿಪ್ರಾಯ ಸಂಗ್ರಹಿಸಲು ಬಂದಿರುವ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನ ಮಲ್ಲೇಶ್ವರಂನಲ್ಲಿರವ ಬಿಜೆಪಿ ಕಚೇರಿಗೆ ಭೇಟಿ ನೀಡಿದು. ಈ ವೇಳೆ ಅವರನ್ನು ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಾಗತಿಸಿದರು. ಬಳಿಕ ವಿಜಯೇಂದ್ರ ಅವರು ನಿರ್ಮಲಾ ಸೀತಾರಾಮನ್ ಜೊತೆ ಮಾತುಕತೆ ನಡೆಸಿದರು. ಬಳಿಕ ಎಲ್ಲರೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ತೆರಳಿದರು.

ವೀಕ್ಷಕರನ್ನು ಭೇಟಿಯಾದ ಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿ
ಇನ್ನು ವಿಧಾನಪರಿಷತ್ ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು, ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಭೇಟಿ ಮಾಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪೂಜಾರಿ, ಮೇಲ್ಮನೆ ವಿರೋಧ ಪಕ್ಷದ ಸ್ಥಾನದ ಅವಕಾಶ ಕೊಟ್ಟರೆ, ನಿಭಾಯಿಸುವುದಾಗಿ ವರಿಷ್ಠರಿಗೆ ಹೇಳಿದ್ದೇನೆ. ಇವತ್ತು ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಸಭೆಯಲ್ಲಿ ಎರಡು ಮನೆಗಳಿಗೂ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ. ನಾನು ಆಕಾಂಕ್ಷಿ ಎನ್ನುವುದಕ್ಕಿಂತ ಮುಖ್ಯವಾಗಿ ನನಗೆ ಅವಕಾಶ ಕೊಟ್ಟರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಮನವಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಧಾರವಾಡದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸಾವಿರಾರು ಜನ ಅನೇಕ ತಿಂಗಳಿಂದ ರೇಷನ್ ಪಡೆದೇ ಇಲ್ಲ!

ಗುಡ್‌ನ್ಯೂಸ್: NWKRTC ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿ ಯಶಸ್ವಿ

ಉಂಡ ಮನೆಗೆ ದ್ರೋಹ ಜ್ಯುವೆಲ್ಲರಿ ಶಾಪ್ನಿಂದ ಕೆಜಿ ಕೆಜಿ ಚಿನ್ನ, ಬೆಳ್ಳಿ ಕದ್ದ ಮನೆ ಕೆಲಸದಾಳು

- Advertisement -

Latest Posts

Don't Miss