- Advertisement -
Bengaluru News: ಬೆಂಗಳೂರು : ಪಂಚ ರಾಜ್ಯ ಚುನಾವಣೆ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಕುರಿತು ಖ್ಯಾತ ಉದ್ಯಮಿ ಆನಂದ್ ಮಹಿಂದ್ರಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಯಾವುದೇ ಬ್ಲಾಕ್ ಬಸ್ಟರ್ ಸಿನಿಮಾ, ಕ್ರೀಡಿಗಿಂತಲೂ ರೋಚಕವಾಗಿದೆ ಎಂದು ಬರೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಿರುವ ಪಂಚ ರಾಜ್ಯಗಳ ಚುನಾವಣೆಯ ಅಂತಿಮ ಫಲಿತಾಂಶ ಹೊರಬೀಳುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ.
‘ಕಾಂಗ್ರೆಸ್ ಬಿಟ್ಟಿ ಭಾಗ್ಯಗಳ ಆಸೆಯನ್ನು ಮೀರಿ ಜನ ಬಿಜೆಪಿ ಕೈ ಹಿಡಿದಿದ್ದಾರೆ’
ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನ ಜಯಭೇರಿ: ಶಿವರಾಜ್ ಸಿಂಗ್ ಚೌಹಾಣ್‌ರನ್ನು ಭೇಟಿಯಾದ ಸಿಂಧ್ಯಾ..
- Advertisement -