Political News:
ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ. 1951ರ ಪ್ರಜಾ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 33(7) ಘೋಷಿಸುವಂತೆ ಕೋರಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ, ಜೆ.ಬಿ.ಪರ್ಡಿವಾಲಾ ಪೀಠ ನಡೆಸಿತು. ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಬಹುದೇ ಎಂದು ನಿರ್ಧರಿಸುವುದು ಸಂಸತ್ತಿಗೆ ಬಿಟ್ಟದ್ದು. ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದಾಗ, ಎಲ್ಲಿಂದ ಆಯ್ಕೆಯಾಗುತ್ತೀರಿ ಎಂದು ನಿಮಗೆ ತಿಳಿದಿರುವುದಿಲ್ಲ. ಅದರಲ್ಲಿ ತಪ್ಪೇನಿದೆ? ಇದು ಚುನಾವಣಾ ಪ್ರಜಾಪ್ರಭುತ್ವದ ಭಾಗವಾಗಿದೆ’ ಎಂದು ನ್ಯಾಯಾಲಯ ಹೇಳಿದೆ.
ಬಜೆಟ್ ನ ಯಾವುದೇ ಯೋಜನೆ ಅನುಷ್ಠಾನಕ್ಕೆ ಬರುವುದಿಲ್ಲ..!: ಸಿದ್ದರಾಮಯ್ಯ