Friday, November 28, 2025

Latest Posts

GBA ವ್ಯಾಪ್ತಿಗೆ ಆನೇಕಲ್‌ ಸೇರುತ್ತಾ?

- Advertisement -

ಎಲೆಕ್ಟ್ರಾನಿಕ್ ಸಿಟಿ, ವೈಟ್‌ಫೀಲ್ಡ್‌ ಸೇರಿ ಬೆಂಗಳೂರಿನ ಹೊರ ವಲಯದ ಹಲವು ಪ್ರದೇಶಗಳನ್ನು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ತರಲಾಗುವುದು. ಹೀಗಂತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವಿಷಯದ ಕುರಿತು ಚರ್ಚಿಸಲು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗಿದೆ.

ಮುಂಬರುವ ದಿನಗಳಲ್ಲಿ ಕೆಲ ಪ್ರದೇಶಗಳ ಭಾಗಗಳನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲಾಗುತ್ತದೆ. ಬಿ.ಎಸ್‌. ಪಾಟೀಲ್‌ ನೇತೃತ್ವದ ಸಮಿತಿ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ಸಿದ್ಧಪಡಿಸುತ್ತಿದೆ. ಈಗಿರುವ ಪಾಲಿಕೆಗಳ ವ್ಯಾಪ್ತಿಯಿಂದಾಚೆಗೆ 25 ಲಕ್ಷ ಜನಸಂಖ್ಯೆ ಇದೆ. ಅವರನ್ನು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಿಕೊಳ್ಳಬೇಕಾಗುತ್ತದೆ. ಎಲೆಕ್ಟ್ರಾನಿಕ್‌ ಸಿಟಿ, ವೈಟ್‌ಫೀಲ್ಡ್‌, ಏರ್‌ಪೋರ್ಟ್‌ ರಸ್ತೆ, ಯಲಹಂಕದ ಕೆಲ ಪ್ರದೇಶಗಳು ಇನ್ನೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಉಳಿದುಕೊಂಡಿವೆ.

ಸಂಪೂರ್ಣವಾಗಿ ನಗರೀಕರಣಗೊಂಡಿರುವ ಪ್ರದೇಶಗಳಲ್ಲಿಅಚ್ಚುಕಟ್ಟಾದ ಯೋಜನೆ ರೂಪಿಸಬೇಕಿದೆ. ಮುಂದಿನ ದಿನಗಳಲ್ಲಿ ಆನೇಕಲ್ ಅನ್ನು ಜಿಬಿಎ ವ್ಯಾಪ್ತಿಗೆ ತರಲಾಗುವುದು. ಈಗಾಗಲೇ ಕಾವೇರಿ ನೀರನ್ನು ಒದಗಿಸಲಾಗುತ್ತಿದ್ದು, ಅಲ್ಲಿ ವಾಸಿಸುವ ಜನರಿಗೆ ಒದಗಿಸಬೇಕಾದ ಇತರ ಸೌಲಭ್ಯಗಳ ಕುರಿತು ಚರ್ಚೆ ನಡೆಸಲಾಗುವುದು. ಆನೇಕಲ್ ಪ್ರದೇಶದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಒಂದು ಯೋಜನೆಯನ್ನು ಆದಷ್ಟು ಬೇಗ ರೂಪಿಸಬೇಕಿದೆ. ನಾಗರಿಕ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ. ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ರು.

ಯತೀಂದ್ರ ಮತ್ತು ಇತರ ಶಾಸಕರ ಹೇಳಿಕೆಗಳ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಪ್ರಶ್ನೆಗೆ ಡಿಸಿಎಂ ಡಿಕೆಶಿ ಉತ್ತರಿಸಿದ್ದು, ಸೂಕ್ತ ಸಮಯದಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದ್ರು. ಆಳಂದ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ, 6,000 ಹೆಸರುಗಳನ್ನು ತೆಗೆದುಹಾಕಿರುವ ಬಗ್ಗೆ ಯಾವುದೇ ಸಂದೇಹವಿಲ್ಲ. ಅಧಿಕಾರಿಗಳು ಬಹಳ ಹಿಂದೆಯೇ ದೂರು ನೀಡಿದ್ದಾರೆ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ರು.

- Advertisement -

Latest Posts

Don't Miss