Friday, July 18, 2025

Latest Posts

ಆನೆ ಗಾತ್ರದ ಕಾರು ಭರ್ಜರಿ ಸೇಲ್! : ಈ ಕಾರು ಅಂದ್ರೆ ಜನ ಮುಗಿಬಿಳ್ತಾರೆ

- Advertisement -

ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ. 2024ರ ಜೂನ್‌ ನಲ್ಲಿಯೂ 223 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.

ಅದರ ಹೊರತಾಗಿಯೂ ಈ ವರ್ಷದ ಮೊದಲ 5 ತಿಂಗಳಲ್ಲೂ ಇದೇ ಮಾರುತಿ ಸುಜುಕಿ ಇನ್ವಿಕ್ಟೋ ಎಂಪಿವಿ 1,654 ಯುನಿಟ್‌ಗಳು ಮಾರಾಟವಾಗಿವೆ. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಪ್ರತಿ ತಿಂಗಳು ಸರಿ ಸುಮಾರು 330 ಯುನಿಟ್‌ಗಳು ಮಾರಾಟಗೊಂಡಿವೆ.

ಈ ಕಾರಿನ ವಿಶೇಷತೆಗಳೆಂದರೆ – ಇದೊಂದು ಎಂಪಿವಿ ಯಾಗಿದ್ದು, ನೆಕ್ಸಾ ಡೀಲರ್‌ಶಿಪ್‌ ಮೂಲಕ ಮಾರಾಟ ಮಾಡಲಾಗುತ್ತದೆ. ಕನಿಷ್ಠ ರೂ.25.51 ಲಕ್ಷ ಹಾಗೂ ಗರಿಷ್ಠ ರೂ.29.22 ಲಕ್ಷ ಇದೆ. ಈ ಕಾರು ಜಿಟಾ ಹಾಗೂ ಆಲ್ಪಾ ಎಂಬ ವೇರಿಯೆಂಟ್ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರ ಸೆಳೆಯುವಂತಿದೆ. ಮಿಸ್ಟಿಕ್ ವೈಟ್, ಮೆಜೆಸ್ಟಿಕ್ ಸಿಲ್ವರ್, ಸ್ಟೆಲ್ಲರ್ ಬ್ರೋನ್, ನೆಕ್ಸಾ ಬ್ಲೂ ಹಾಗೂ ಮ್ಯಾಗ್ನಿಫಿಸೆಂಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 4755 ಎಂಎಂ ಉದ್ದ, 1850 ಎಂಎಂ ಅಗಲ ಹಾಗೂ 1795 ಎತ್ತರವು ಇದೆ. ಜೊತೆಗೆ 185 ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ವೀಲ್‌ಬೇಸ್‌ನ್ನು ಒಳಗೊಂಡಿದೆ. ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಪೆಟ್ರೋಲ್ + ಎಲೆಕ್ಟ್ರಿಕ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 23.24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಲಿದೆ.

 

ವರದಿ:ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss