Friday, November 22, 2024

Latest Posts

ಅಧಿಕಾರಿಗಳು, ಗುತ್ತಿಗೆದಾರರ ಲಂಚಾವತಾರದ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ನೌಕರರು

- Advertisement -

Hubballi News: ಹುಬ್ಬಳ್ಳಿ: ರಾಜ್ಯ ಸರ್ಕಾರ ಹಾಗೂ ಇಂಧನ‌ ಇಲಾಖೆಯಿಂದ ಗುತ್ತಿಗೆ ನೌಕರರಿಗೆ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಗುತ್ತಿಗೆ ನೌಕರರು, ಪ್ರತಿಭಟನೆ ನಡೆಸುವುದಾಗಿ ಆಕ್ರೋಶ ಹೊರಹಾಕಿದ್ದಾರೆ.

ಕಳೆದ 15-20 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರೋ ಗುತ್ತಿಗೆ ನೌಕರರು, ಪ್ರತಿ ತಿಂಗಳು ಗುತ್ತಿಗೆದಾರರಿಗೆ ಹಾಗೂ ಅಧಿಕಾರಿಗಳಿಗೆ 3 ರಿಂದ 4 ಸಾವಿರ ರೂಪಾಯಿ ಲಂಚ ಕೊಡಲೇಬೇಕಾಗಿದೆ ಎಂದು ಕೆಪಿಟಿಸಿಎಲ್ ಗುತ್ತಿಗೆ ನೌಕರರಿಂದ ಗುತ್ತಿಗೆದಾರರು ಹಾಗೂ ಇಂಧನ ಇಲಾಖೆಯ ಅಧಿಕಾರಿಗಳ ಮೇಲೆ ಗಂಭೀರ ಆರೋಪ ಮಾಡಲಾಗಿದೆ.

ನೂತನ ಸರ್ಕಾರ ಹಾಗೂ ಅಧಿಕಾರಿಗಳ ಮೇಲೆ ಈ ರೀತಿ ಗಂಭೀರ ಆರೋಪ ಮಾಡಲಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಲಂಚಾವತಾರ ಶುರುವಾಯಿತಾ ಎಂಬ ಪ್ರಶ್ನೆ ಉದ್ಭವಿಸಿದೆ. ಕೆಪಿಟಿಸಿಎಲ್ ಗುತ್ತಿಗೆ ನೌಕರರು, ಸೇವಾ ಭದ್ರತೆ ಇಲ್ಲದೇ ಹಗಲಿರುಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇವರನ್ನು ಖಾಯಂ ಮಾಡಿಕೊಳ್ಳದೇ, ಸರ್ಕಾರ ಅನ್ಯಾಯ ಮಾಡುತ್ತಿದೆ ಎಂಬ ಆರೋಪವಿದೆ. ಇನ್ನೊಂದೆಡೆ ಪ್ರತೀ ತಿಂಗಳೂ, ಸಂಬಳದಲ್ಲಿ ಅಧಿಕಾರಿಗಳು, ಗುತ್ತಿಗೆದಾರರು ಲಂಚ ವಸೂಲಿ ಮಾಡುತ್ತಿದ್ದಾರೆಂದು ಹೇಳಲಾಗಿದೆ.

ಈಗಾಗಲೇ ಹುಬ್ಬಳ್ಳಿಯಲ್ಲಿ 10 ಸಾವಿರಕ್ಕೂ ಅಧಿಕ ಗುತ್ತಿಗೆ ನೌಕರರು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದು, ಸ್ಟೇಶನ್ ಆಪರೇಟರ್, ಗ್ಯಾಂಗ್ ಮೆನ್, ಸ್ಟೇಸನ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ರೀತಿ ಲಂಚ ಕೊಡಬೇಕಾದ ಪರಿಸ್ಥಿತಿ ಇದ್ದು,  ಸರ್ಕಾರ ಹಾಗೂ ಇಂಧನ ಇಲಾಖೆಯ ವಿರುದ್ಧ ಹೋರಾಟಕ್ಕೆ ಗುತ್ತಿಗೆ ನೌಕರರು ಹೋರಾಟಕ್ಕೆ ಮುಂದಾಗಿದ್ದಾರೆ. ಆಗಷ್ಟ್ 10 ರಿಂದ ಸರ್ಕಾರ ಹಾಗೂ ಇಲಾಖೆಯ ವಿರುದ್ಧ ಗುತ್ತಿಗೆ ನೌಕರರು ಹೋರಾಟಕ್ಕಿಳಿಯಲು ಮುಂದಾಗಿದ್ದಾರೆ.

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಕೋತಿ ಮರಿಯ ರಕ್ಷಣೆ ಮಾಡಿದ ಯುವಕ

ಉದ್ಯೋಗ ಮೇಳದಲ್ಲಿ ಖಾಸಗಿ ಕಂಪೆನಿಯಿಂದ ಹಣ ವಸೂಲಿ: ಅರ್ಜಿಗಳಿಗೆ ಬೆಂಕಿ ಹಾಕಿ ಆಕ್ರೋಶ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Latest Posts

Don't Miss