- Advertisement -
ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ಉಂಗುರ ಬದಲಾಯಿಸಿಕೊಳ್ಳುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ನಿಶ್ಚಿತಾರ್ಥಕ್ಕೆ ಶುಭ ಕೋರಲು ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಆಗಮಿಸಿದ್ದರು. ನಿಶ್ಚಿತಾರ್ಥ ಮಾಡಿಕೊಂಡ ಕ್ಯೂಟ್ ಜೋಡಿಗೆ ರಾಕಿಂಗ್’ ದಂಪತಿ ಅಭಿನಂದನೆ ತಿಳಿಸಿದ್ದಾರೆ. ನಿಶ್ಚಿತಾರ್ಥಕ್ಕೆ ಕೆಲವು ಕುಟುಂಬಸ್ಥರು, ಆಪ್ತರು ಮತ್ತು ಚಿತ್ರರಂಗದ ಕೆಲವು ಗಣ್ಯರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಹೊಸ ಜೊಡಿಗೆ ಎಲ್ಲರೂ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.
ನಾಗ್ಪುರದಲ್ಲಿ ನಡೆದ ಸಮಾರಂಭದಲ್ಲಿ ಡೊಳ್ಳು ಬಾರಿಸಿದ ಪ್ರಧಾನಿ ಮೋದಿ
- Advertisement -


