Eshwar Khandre : ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು- ಈಶ್ವರ್ ಖಂಡ್ರೆ

Mysore News : ಮೈಸೂರಿನ ಸುತ್ತೂರು ಶಾಖಾಮಠದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಯವರ ದರ್ಶನ ಪಡೆದ ಬಳಿಕ ಮಾಧ್ಯಮದ ಮುಂದೆ ಮಾತನಾಡಿದ ಈಶ್ವರ್ ಖಂಡ್ರೆ ಮೈಸೂರು ಸೇರಿದಂತೆ ರಾಜ್ಯದ 5 ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲಾಗುವುದು ಎಂದರು.

ರಾಜ್ಯದಲ್ಲಿ ಅಷ್ಟೇ ಅಲ್ಲ ವಿಶ್ವಾದ್ಯಂತ ಪ್ಲಾಸ್ಟಿಕ್ ಅತಿ ದೊಡ್ಡ ಸಮಸ್ಯೆಯಾಗಿದೆ, ಪ್ಲಾಸ್ಟಿಕ್ ತ್ಯಾಜ್ಯದಿಂದ ನೂರಾರು ಸಮಸ್ಯೆಗಳು ತಲೆ ದೋರುತ್ತಿವೆ, ಈ ಹಿನ್ನೆಲೆ ಪ್ಲಾಸ್ಟಿಕ್ ಮುಕ್ತ ಮಾಡುವ ಸಂಕಲ್ಪವನ್ನು ನಮ್ಮ ಸರ್ಕಾರ ಕೈಗೊಂಡಿದೆ. ವಿಶ್ವ ಪರಿಸರ ದಿನದಂದು 5 ನಗರಗಳನ್ನ ಏಕಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲು ಸಂಕಲ್ಪ ಮಾಡಿದ್ದು ಅದರಂತೆ ಕಲ್ಬುರ್ಗಿ ಬೀದರ್, ಮೈಸೂರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಮೊದಲ ಹಂತದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಮಾಡಲಾಗುವದು. ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸುತ್ತೂರು ಶ್ರೀಗಳ ದರ್ಶನ ಪಡೆದ ಈಶ್ವರ್ ಖಂಡ್ರೆ ಶ್ರೀಗಳ ಆಶೀರ್ವಾದ ಪಡೆದರು.

Mahadaayi- ಹೋರಾಟಕ್ಕೆ ಮುಂದಾದ ಮಹಾದಾಯಿ ರೈತರು

Santosh lad-ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ.

Gruha laxmi-ಸೋಮವಾರ ಸಂಜೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

About The Author