Sunday, April 13, 2025

Latest Posts

Eshwar Khandre : ಗಾಂಧೀಜಿ ಹುಟ್ಟಿದ ನಾಡಿನಲ್ಲಿ ವರ್ಣಭೇದ ನೀತಿ ಪೋಷಿಸುತ್ತಿರುವ ಬಿಜೆಪಿ : ಈಶ್ವರ್ ಖಂಡ್ರೆ ಕಿಡಿ

- Advertisement -

Banglore News : ಆಗಸ್ಟ್ 2 : ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.

“ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು ನೋಡಿದರೆ ಇದು ಗೊತ್ತಾಗುತ್ತದೆ’ಎಂದು ಹೇಳುವ ಮೂಲಕ ಆರಗ ಜ್ಞಾನೇಂದ್ರ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮತ್ತು ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಷ್ಟೇ ಅಲ್ಲದೆ ರಾಜ್ಯದ ಅದರಲ್ಲೂ ಇಡೀ ಕಲ್ಯಾಣ ಕರ್ನಾಟಕದ ಜನತೆಗೆ ಅವಮಾನ ಮಾಡಿದ್ದಾರೆ ಇದು ಮಾಜಿ ಸಚಿವರ ಘನತೆಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಆರಗ ಜ್ಞಾನೇಂದ್ರ ಅವರು  ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ತಿಳಿಸಿದ್ದಾರೆ.

ಆರಗ ಜ್ಞಾನೇಂದ್ರ  ಅವರು ಮಲ್ಲಿಕಾರ್ಜುನ ಖರ್ಗೆ ಹಾಗೂ ತಮಗಷ್ಟೇ ಅಲ್ಲದೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಬೇಷರತ್ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದ್ದಾರೆ.

Narendra Modi : ಗ್ಯಾರಂಟಿ ವಿಚಾರ ಮುಂದಿಟ್ಟೇ ಲೋಕ ಸಭೆ ಚುನಾವಣೆ ಎದುರಿಸುತ್ತೇವೆ : ಮೋದಿಗೆ ಸಿಎಂ ಸವಾಲು..!

DK Shivakumar : ಆರಗ ಜ್ಞಾನೇಂದ್ರ ರನ್ನು ನಿಮ್ಹಾನ್ಸ್ ಗೆ ಕಳಿಸೋಣ : ಡಿ ಕೆ ಶಿವಕುಮಾರ್

Pramod Muthalik : ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯದಂತೆ ಶ್ರೀರಾಮಸೇನೆ ಮುಖ್ಯಸ್ಥ ಆಗ್ರಹ

- Advertisement -

Latest Posts

Don't Miss