Political News: ವಾಲ್ಮೀಕಿ ನಿಗಮದ ಹಗರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಹೊರಗಿರುವ ಮಾಜಿ ಸಚಿವ ಬಿ. ನಾಗೇಂದ್ರಗೆ ಒಂದಿಲ್ಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಅಲ್ಲದೆ 187 ಕೋಟಿ ರೂಪಾಯಿ ಬೃಹತ್ ಹಗರಣಕ್ಕೆ ಸಂಬಂಧಿಸಿದ್ದಂತೆ ನಾಗೇಂದ್ರ ವಿರುದ್ಧ ಇದೀಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಅಲ್ಲದೆ ಈ ಮೊದಲು ನಡೆದಿದ್ದ ವಾಲ್ಮೀಕಿ ನಿಗಮ ಹಗರಣದಲ್ಲಿ ಆಗ ಸಚಿವರಾಗಿದ್ದ ನಾಗೇಂದ್ರ ತಲೆದಂಡವಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ಇಡಿ ಅಂದರೆ ಜಾರಿ ನಿರ್ದೇಶಾನಾಲಯದ ಅಧಿಕಾರಿಗಳು ಇತ್ತೀಚೆಗೆ ಚಾರ್ಜ್‌ಶೀಟ್ ದಾಖಲಿಸಿದ್ದರು. ಇನ್ನೂ 187 ಕೋಟಿ ರೂಪಾಯಿ ಹಗರಣ ಸಂಬಂಧ 4ಸಾವಿರದ 970 ಪುಟಗಳ ಚಾರ್ಜ್‌ಶೀಟ್ ಜೊತೆಗೆ 144 ಪುಟಗಳ ದೂರು ಸಲ್ಲಿಸಿದ್ದರು. ಇಡಿ ಚಾರ್ಜ್‌ಶೀಟ್‌ನಲ್ಲಿ ಮಾಜಿ ಸಚಿವ ನಾಗೇಂದ್ರ A1 ಆಗಿದ್ದರು. ನಾಗೇಂದ್ರ ಮತ್ತು ಅವರ ತಂಡ ಅಕ್ರಮ ನಡೆಸಿರುವುದು ಇಡಿ ತನಿಖೆಯಲ್ಲಿ ದೃಢವಾಗಿತ್ತು. 187 ಕೋಟಿ ರೂಪಾಯಿಗಳಲ್ಲಿ ಒಟ್ಟು 84 ಕೋಟಿ ರೂಪಾಯಿ ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಅಕ್ರಮವಾಗಿ ಹಣ ಬಳಸಲು ನಾಗೇಂದ್ರ ಒಳಸಂಚು ರೂಪಿಸಿದ್ದಾರೆ. ಜೊತೆಗೆ ಸಾಕ್ಷ್ಯ ನಾಶ ಮಾಡಲು ಹುನ್ನಾರ ನಡೆಸಿದ್ದಾರೆ ಎಂಬೆಲ್ಲ ವಿಚಾರಗಳನ್ನು ಚಾರ್ಜ್‌ಶೀಟ್‌ನಲ್ಲಿ ಇಡಿ ವಿವರಿಸಿತ್ತು.
ನಾಗೇಂದ್ರ ಬಂಧಿಸಿತ್ತು ಇಡಿ..!
ಇನ್ನೂ ಕಳೆದ 2014ರಲ್ಲಿ ನಾಗೇಂದ್ರ ಅವರನ್ನು ನಿಗಮದ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಇದೇ ಪ್ರಕರಣದಲ್ಲಿ ಇಡಿ ಬಂಧಿಸಿ ಜೈಲಿಗೆ ಕಳುಹಿಸಿತ್ತು. ಅಲ್ಲದೆ ಈ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಸಚಿವ ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿಯನ್ನೂ ಸಹ ಇಡಿ ಕೇಳಿತ್ತು. ಇಡಿ ಮನವಿಯನ್ನು ಪುರಸ್ಕರಿಸಿರುವ ರಾಜ್ಯಪಾಲರು ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಈಗ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದರಿಂದ ಅವರಿಗೆ ಮತ್ತಷ್ಟು ಸಂಕಷ್ಟಕ್ಕೆ ಸಿಲಕುವಂತಾಗಿದೆ.
ಭಗ್ನವಾಯಿತಾ ಮಂತ್ರಿಗಿರಿ ಕನಸು..?
ಇನ್ನೂ ಇದೇ ಹಗರಣಕ್ಕೆ ಸಂಬಂಧಿಸಿದ್ದಂತೆ ವಿಪಕ್ಷಗಳ ಆಕ್ರೋಶ ಹಾಗೂ ಹೋರಾಟಕ್ಕೆ ಮಣಿದಿದ್ದ ಕಾಂಗ್ರೆಸ್ ಸರ್ಕಾರ, ಇದರಿಂದಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಕೆಲಸ ಮಾಡಿ ನಾಗೇಂದ್ರ ರಾಜೀನಾಮೆ ಪಡೆದಿತ್ತು. ಅಲ್ಲದೆ ಹಗರಣದಲ್ಲಿ ದೋಷಮುಕ್ತರಾದ ಬಳಿಕ ಮತ್ತೆ ಸಂಪುಟ ಸೇರ್ಪಡೆ ಮಾಡಿಕೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದರು. ಅದರಂತೆ ಸಿದ್ದರಾಮಯ್ಯ ಸಿದ್ಧತೆ ನಡೆಸುತ್ತಿದ್ದರು, ನಾಗೇಂದ್ರ ಕೂಡ ಅದೇ ಉಮೇದಿನಲ್ಲಿದ್ದರು. ಇನ್ನೇನು ಮುಂಬರುವ ಸಂಪುಟ ವಿಸ್ತರಣೆಯಲ್ಲಿ ನಾಗೇಂದ್ರ ಫಿಕ್ಸ್ ಮಂತ್ರಿಯಾಗ್ತಾರೆ ಎನ್ನಲಾಗುತ್ತಿತ್ತು. ಆದರೆ ರಾಜ್ಯಪಾಲರು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಗಮನಿಸಿದರೆ ನಾಗೇಂದ್ರ ಮಂತ್ರಿಗಿರಿ ಕನಸು ಭಗ್ನವಾದಂತೆ ಕಂಡು ಬರುತ್ತಿದೆ.
ಏನಿದು ಹಗರಣ..?
ಕಳೆದ ವರ್ಷ 20214ರಲ್ಲಿ ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂ.ಜಿ.ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಖಾತೆಯಿಂದ 94.73 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ನಿಗಮದ ಲೆಕ್ಕ ಅಧೀಕ್ಷಕ ಪಿ.ಚಂದ್ರಶೇಖರ್ ಅವರು ಡೆತ್ ನೋಟ್ ಬರೆದು ಅತ್ಮಹತ್ಯೆಗೆ ಶರಣಾಗಿದ್ದರಿಂದ ಹಗರಣ ಬೆಳಕಿಗೆ ಬಂದಿತ್ತು. ಬಹುಕೋಟಿ ಹಣ ದುರ್ಬಳಕೆ ಸಂಬಂಧ 2014ರ ಮೇ.29ರಂದು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮತ್ತೊಂದೆಡೆ ಇ.ಡಿ. ಸಹ ಪ್ರಕರಣ ದಾಖಲಿಸಿಕೊಂಡು ನಾಗೇಂದ್ರರನ್ನು ಬಂಧಿಸಿತ್ತು.