National Political News: ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ ಅಯೋಧ್ಯೆಗೆ ಬರಲು ಹಿಂದೇಟು ಹಾಾಕುತ್ತಿದ್ದವರು, ಈಗ ಈ ಸಮಾರಂಭಕ್ಕೆ ಆಹ್ವಾನ ಬಯಸುತ್ತಿದ್ದಾರೆ. ಅಲ್ಲದೇ, ರಾಮಮಂದಿರ ಉದ್ಘಾಟನೆಗೆ ನಮಗೆ ಇನ್ನೂ ಆಹ್ವಾನ ಬಂದಿಲ್ಲವೆಂದು ಬೇಸರಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಹೀಗೆ ಮಾತು ಮುಂದುವರಿಸಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಯೋಧ್ಯೆ ದೇವಸ್ಥಾನದ ಸುತ್ತಮುತ್ತಲು ನಡೆದಿರುವ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಹಲವು ವರ್ಷಗಳ ಹಿಂದೆ, ರಾಮಾಯಣದಲ್ಲಿ ವಿಮಾನವನ್ನು ಉಲ್ಲೇಖಿಸಲಾಗಿತ್ತು. ಪುಷ್ಪಕ ವಿಮಾನದಲ್ಲಿ ರಾಮ ಅಯೋಧ್ಯೆಗೆ ಬಂದ ಎನ್ನಲಾಗಿತ್ತು. ಇದೀಗ ಅಯೋಧ್ಯೆಯಲ್ಲಿ ಏರ್ಪೋರ್ಟ್ ಉದ್ಘಾಟನೆಯಾಗಿದೆ. ಅದಕ್ಕೆ ನಾವು ಮಹರ್ಷಿ ವಾಲ್ಮೀಕಿ ಏರ್ಪೋರ್ಟ್ ಎಂದು ನಾಮಕರಣ ಮಾಡಿದ್ದೇವೆ ಎಂದಿದ್ದಾರೆ.
ಅಲ್ಲದೇ, ನೀವು ಅಯೋಧ್ಯೆಗೆ ಬಂದರೆ, ತ್ರೇತಾಯುಗಕ್ಕೆ ಮರಳಿದಂತೆ ನಿಮಗೆ ಭಾಸವಾಗುತ್ತದೆ ಎಂದಿದ್ದಾರೆ. ಇನ್ನು ರೈಲ್ವೆ ನಿಲ್ದಾಣ ಉದ್ಘಾಟನೆಯಾಗಿದ್ದು, ಜಲ ಸಂಪರ್ಕದ ಬಗ್ಗೆಯೂ ಯೋಚಿಸಲಾಗಿದೆ ಎಂದಿದ್ದಾರೆ.
ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..
‘ಹುಬ್ಬಳ್ಳಿಯ ರಾಮ ಜನ್ಮಭೂಮಿ ಹೋರಾಟ ಬಂಧನ ಮತ್ತು ಅಯೋಧ್ಯೆಗೂ ಯಾವುದೇ ಸಂಬಂಧವಿಲ್ಲ’