Thursday, February 6, 2025

Latest Posts

ಸುಪ್ರೀಂನಿಂದ ಜನಪರ ಆದೇಶ…

- Advertisement -

www.karnatakatv.net: ರಾಷ್ಟ್ರೀಯ- ನವದೆಹಲಿ- ಕೋವಿಡ್-19 ಮಹಾಮಾರಿಗೆ ಬಲಿಯಾದವರ ಕುಟುಂಬಗಳಿಗೆ ಮಾನವೀಯ ನೆಲೆಗಟ್ಟಿನಲ್ಲಿ ಪರಿಹಾರ ಕೊಡಲು ಮಾರ್ಗಸೂಚಿ ರಚಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮಾರ್ಗಸೂಚಿ ರಚಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುಮಾರು ಒಂದೂವರೆ ತಿಂಗಳಷ್ಟು ಕಾಲಾವಧಿಯನ್ನು ಕೋರ್ಟ್ ನೀಡಿದೆ. ಕೋವಿಡ್ ನಿಂದ ಮೃತಪಟ್ಟ ಪ್ರತೀ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ.ರೂ ಪರಿಹಾರ ಒದಗಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ನ್ಯಾ. ಅಶೋಕ್ ಭೂಷಣ್ ನೇತೃತ್ವದ ತ್ರಿಸದಸ್ಯ ಸುಪ್ರೀಂ ನ್ಯಾಯಪೀಠ ಇಂದು ಈ ಆದೇಶ ಹೊರಡಿಸಿದೆ.

- Advertisement -

Latest Posts

Don't Miss