- Advertisement -
ದಾವಣಗೆರೆ: ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರ ಅಳಿಯ ಪ್ರತಾಪ್ ಕುಮಾರ್ ಕೆಜಿ (41) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಸಿ ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಅವರ ಪತಿ ಪ್ರತಾಪ್ ಕುಮಾರ್ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪ್ರತಾಪ್ ವಿಷ ಸೇವಿಸುವನ್ನು ಕಂಡ ಸ್ಥಳೀಯರು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ದಾವಣಗೆರೆ ಕತ್ತಲಗೆರೆ ಗ್ರಾಮದ ಪ್ರತಾಪ್ ಕುಮಾರ್, 15 ವರ್ಷದ ಹಿಂದೆ ಸೌಮ್ಯಳನ್ನು ಮದುವೆಯಾಗಿದ್ದರು.
KA 68 M 1458 ನಂಬರಿನ Venue ಕಾರಿನಲ್ಲಿ ಬಂದಿದ್ದ ಪ್ರತಾಪಕುಮಾರ, ಹರಿಹರ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಬರುವ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದ ಬಳಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದಾರೆ. ಕಾರಿನಲ್ಲಿ ವಿಷದ ಬಾಟಲಿ ಪತ್ತೆಯಾಗಿದೆ.
- Advertisement -