- Advertisement -
www.karnatakatv.net ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿಯಾಗಿದ್ದ ಮಾಜಿ ಮಂತ್ರಿ ರೋಷನ್ ಬೇಗ್ ಅವರ ಆಸ್ತಿಯನ್ನು ಇನ್ನು ಜಪ್ತಿ ಮಾಡಿಲ್ಲವೇಕೆ ಎಂದು ಎರಡು ದಿನಗಳ ಹಿಂದೆ ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಐಎಂಎ ಇಂದ 10ಕೋಟಿ ರೂ ದೇಣಿಗೆ ಪಡೆದಿರುವುದು ಹಾಗೂ ಆಸ್ತಿ ಜಪ್ತಿ ವಿಚಾರವಾಗಿ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತ್ತು.ಈ ಹಿನ್ನೆಲೆಯಲ್ಲಿ ಇಂದು ಸಚಿವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
- Advertisement -