- Advertisement -
ಕೊಲೊಂಬೊ: ದ್ವೀಪ ರಾಷ್ಟ್ರ ಶ್ರೀಲಂಕಾ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದೆ. ಇದರ ಪರಿಣಾಮ ಆಹಾರ, ಔಷಧ, ಅಡುಗೆ ಅನಿಲ, ಇಂಧನ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಇಲ್ಲಿನ ಸಾರ್ವಜನಿಕರು ಗಂಟೆಗಟ್ಟಲೇ ಸಾಲಿನಲ್ಲಿ ನಿಲ್ಲಬೇಕಿದೆ.
ಜನರ ಸಂಕಷ್ಟ ನೋಡಲು ಆಗದೆ ಲಂಕಾ ತಂಡದ ಮಾಜಿ ಕ್ರಿಕೆಟಿಗ ರೋಶನ್ ಮಹಾನಮಾ ಪೆಟ್ರೋಲ್ ಬಂಕ್ ಮತ್ತು ಇತರೆ ಸ್ಥಳಗಳಲ್ಲಿ ಸಾಲಿನಲ್ಲಿ ನಿಲ್ಲುವ ಜನರಿಗೆ ಟೀ ಹಾಗೂ ಬನ್ ಕೊಟ್ಟು ಉಪಚರಿಸುತ್ತಿದ್ದಾರೆ.
ಸಮುದಾಯ ಆಹಾರ ಸಂಸ್ಥೆಯ ನೆರೆವಿನೊಂದಿಗೆ ಜನರಿಗೆ ಟೀ ಮತ್ತು ಬನ್ ಕೊಡುತ್ತಿದ್ದೇವೆ. ದಿನದಿಂದ ದಿನಕ್ಕೆ ಸಾಲಿನಲ್ಲಿ ನಿಲ್ಲುವ ಜನರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಸೇವೆ ಮಾಡುತ್ತಿದ್ದೇವೆ ಎಂದಿದ್ದಾರೆ.
- Advertisement -