state news
ಬೆಂಗಳೂರು(ಫೆ.21): ಸಂಪೂರ್ಣ ಕೋವಿಡ್ ಮುಕ್ತವಾಗಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಹಿನ್ನಲೆ ಯಾವುದೇ ತರಹದ ಅಡಚಣೆ ಬಾರದಂತೆ ಪರೀಕ್ಷೆ ನಡೆಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದು ಮಾರ್ಚ್ ತಿಂಗಳಿಂದ ಮೆಟ್ರಿಕ್ ಮತ್ತು ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ವಿಧಾನಸೌಧದಲ್ಲಿ ಇಂದು (ಫೆಬ್ರವರಿ 21) ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಪರೀಕ್ಷಾ ಕ್ರಮ, ಪರೀಕ್ಷೆಯಲ್ಲಿ ಆದ ಬದಲಾವಣೆ, ಭದ್ರತೆ ಹಾಗೂ ನಕಲು ಮುಕ್ತ ಪರೀಕ್ಷೆಯ ಕ್ರಮಗಳ ಕುರಿತು ಚರ್ಚಿಸಲಾಯಿತು. ಪರೀಕ್ಷೆಯಲ್ಲಿ ನಕಲು ತಡೆದು ಸುರಕ್ಷಿತವಾಗಿ ಪರೀಕ್ಷೆ ನಡೆಸುವ ಕುರಿತು ಪೊಲೀಸ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಬಿ.ಸಿ ನಾಗೇಶ್ ಮಾತುಕತೆ ನಡೆಸಿದರು
ಮಾರ್ಚ್ 9 ರಿಂದ 29 ರವರೆಗೂ ದ್ವೀತಿಯ ಪಿಯು ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ SSCL ಪರೀಕ್ಷೆಗಳು ನಡೆಯಲಿದೆ. ಸಭೆಯ ಬಳಿಕ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆಯ ವಿವರಗಳನ್ನು ನೀಡಿದರು. ” ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳು ಭಾಗಿಯಾಗಲಿವೆ. ಒಟ್ಟು 7,27,387 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.
“ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಿಗೆ ಅವಕಾಶ ಇರುವುದಿಲ್ಲ. ಪರೀಕ್ಷೆ ಪ್ರಾರಂಭವಾಗುವ 15 ನಿಮಿಷ ಮೊದಲು ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಇದೆ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಮಲ್ಟಿಪಲ್ ಚಾಯ್ಸ್ ಇರಲಿದೆ. ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ವಿವರಿಸಿದರು.