Excise Minister K Gopalya : ಎರಡು ದಿನಗಳ ಕಾಲ ಮದ್ಯ ಮಾರಾಟ ಬಂದ್..!

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರ ನೈಟ್ ಕರ್ಫ್ಯೂ(Night curfew) ಜೊತೆಗೆ ವೀಕೆಂಡ್ ಕರ್ಫ್ಯೂವನ್ನು ಜಾರಿಗೆ ತಂದಿದೆ. ಇಂದು ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ (Weekend curfew)ಜಾರಿಯಾಗಲಿದ್ದು, ಸೋಮವಾರದ ಬೆಳಗ್ಗೆ ವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆದ್ದರಿಂದ 8:00 ಗಂಟೆಯಿಂದ ಸೋಮವಾರ ಬೆಳಗ್ಗೆ ಯವರಿಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ(Excise Minister K Gopalya) ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಜನರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಲ್ಲಿ ರಾಜ್ಯ ಸರ್ಕಾರ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲಾ ಬಾರ್ ಅಂಡ್ ರೆಸ್ಟೋರೆಂಟ್(Bar and Restaurant) ಮಾಲೀಕರು ಸಹಕರಿಸಬೇಕು ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.


About The Author