www.karnatakatv.net: ರಾಯಚೂರು : ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಆಧಿಕಾರಿಗಳು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಉಪ್ರಾಳ್ ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ, ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ ಮಧ್ಯದಲ್ಲಿ ಸುಮಾರು 229 ಗಾಂಜಾ ಗಿಡಗಳು ಮತ್ತು 1 ಕೆಜಿ ಒಣ ಗಾಂಜಾ ವಶಪಡಿಸಿಕೊಂಡಿದ್ದು. ಖಚಿತ ಮಾಹಿತಿಯೊಂದಿಗೆ ಅಬಕಾರಿ ಡಿ ಸಿ ಲಕ್ಷ್ಮೀ ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಗಾಂಜಾ ವಶಕ್ಕೆ ಪಡೆದು, ಸ್ಥಳದಲ್ಲಿಯೇ ಜಮೀನಿನ ಮಾಲೀಕ ಸಿದ್ದಪ್ಪನನ್ನು ಬಂಧಿಸಿದ್ದಾರೆ. ನಿಯಮಬಾಹಿರವಾಗಿ ಗಾಂಜಾ ಬೆಳೆಯುತ್ತಿರುವುದು ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಲಾಗಿದ್ದು, ಆರೋಪಿ ವಿರುದ್ದ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಜಿಲ್ಲಾಧಿಕಾರಿ ಲಕ್ಷ್ಮೀ ನಾಯಕ ತಿಳಿಸಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು