Sunday, December 22, 2024

Latest Posts

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪಗೆ ಹೃದಯಾಘಾತ : ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ನಿಧನ

- Advertisement -

ಬೆಂಗಳೂರು: ಕರ್ನಾಟಕದ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಲು ಬಂದಿದ್ದ, ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿರದೂರು ಅವರಿಗೆ ಹೈದಯಾಘಾತವಾಗಿದೆ. ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೊರವಲಯ ರೇಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸಭೆ ನಡೆಸಲಾಗಿತ್ತು.

ಓಲಾ, ಊಬರ್ ಆಟೋಗಳಿಗೆ ದರ ನಿಗದಿ ಮಾಡಿದ ಸಾರಿಗೆ ಇಲಾಖೆ

ಸಭೆ ಶುರುವಿನಂದಲೇ ವಾಂತಿಯಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕಾರಿನಲ್ಲಿ ಕರೆದುಕೊಂಡು ಹೋಗಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೆ ಕೊನೆಯುಸಿರೆಳಿದಿದ್ದಾರೆ. ಶ್ರೀಶೈಲಪ್ಪ ಬಿರದೂರು ನಿಧನದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಿದ್ದಾರೆ. ನವೆಂಬರ್ 27ರಂದು ಜೂಮ್ ಮೂಲಕ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿಗದಿ ಮಾಡಿದ್ದಾರೆ. ರೋಣ-ಗದಗ ಕ್ಷೇತ್ರದಿಂದ ಶ್ರೀಶೈಲಪ್ಪ ಬಿರದೂರು 2 ಸಲ ಶಾಸಕರಾಗಿ ಆಯ್ಕೆಯಾಗಿದ್ದಾರು.

ಅಕ್ರಮ ಹಣ ವರ್ಗಾವಣೆ ಪ್ರಕರಣ : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಗೆ ಜಾಮೀನು

ಬೆಂಗಳೂರಿನಲ್ಲಿ ಅಗರಬತ್ತಿ ಎಕ್ಸ್ ಪೋ ಉದ್ಘಾಟನೆ

- Advertisement -

Latest Posts

Don't Miss