ನವದೆಹಲಿ: ಈಗಾಗಲೇ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ. ಇದೀಗ ಮುಂದುವರೆದು 5 ರಿಂದ 12 ವರ್ಷದ ಮಕ್ಕಳಿಗೂ ಕೊರ್ಬೆವ್ಯಾಕ್ಸ್ ಲಸಿಕೆಯನ್ನು ನೀಡೋದಕ್ಕೆ ತಜ್ಞರ ಸಮಿತಿಯು ಡಿಸಿಜಿಐಗೆ ಶಿಫಾರಸ್ಸು ಮಾಡಿದೆ.
ಈ ಬಗ್ಗೆ ವಿಷಯ ತಜ್ಞರ ಸಮಿತಿಯು ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರಕ್ಕೆ ಶಿಫಾರಸ್ಸು ಮಾಡಿದ್ದು, ಡಿಸಿಜಿಐ ಒಪ್ಪಿದರೇ, ಕೇಂದ್ರ ಆರೋಗ್ಯ ಸಚಿವಾಲಯ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದೆ. ಈ ಮೂಲಕ 5 ರಿಂದ 12 ವರ್ಷದ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗುವಂತೆ ಆಗಲಿದೆ.
ಅಂದಹಾಗೇ ಕೊರ್ಬೆವ್ಯಾಕ್ಸ್ ಲಸಿಕೆಯು ಸ್ವದೇಶಿ ನಿರ್ಮಿತ ಲಸಿಕೆಯಾಗಿದೆ. ಇದನ್ನು ಬಯೋಲಾಜಿಕಲ್ ಇ ಲಿಮಿಟೆಡ್ ಅಭಿವೃದ್ಧಿಪಡಿಸಿದೆ. ರಿಸೆಪ್ಟರ್ ಬೈಂಡಿಂಗ್ ಡೊಮೇನ್ ಮಾದರಿಯಲ್ಲಿ ತಯಾರಿಸಲಾಗಿದೆ.




