Monday, December 23, 2024

Latest Posts

ಮಹಿಳೆಯರೇ ಎಚ್ಚರ…! ಫೇಸ್ ಬುಕ್ ಜಾಹಿರಾತು ನೋಡಿ ಮೋಸಹೋಗಬೇಡಿ..!

- Advertisement -

Chikkamagaluru News:

ಫೋನ್ ಮೂಲಕನೇ ನಿಮ್ಮ ಸಮಸ್ಯೆಗಳನ್ನು ಪರಿಹರಿಸಬಹುದು ಎಂಬಂತಹ ಜಾಹಿರಾತಿನ ಮೋಡಿಗೆ ಮೋಸ ಹೋದ ಮಹಿಳೆಯ ದೂರಿನನ್ವಯ ಇದೀಗ ಮೋಸದ ಜಾಲವನ್ನು ಪತ್ತೆ ಹಚ್ಚಿ ವಂಚಕರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದು ಎಂಬುದಾಗಿ Pandit Modi Bettappa Astrology ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿದ್ದ ಜಾಹಿರಾತನ್ನು ನೋಡಿ ಕೌಟುಂಬಿಕ ಸಮಸ್ಯೆ ಇದ್ದಂತಹ ಮಹಿಳೆ ಜಾಹಿರಾತಿನಲ್ಲಿದ್ದ ಫೋನ್ ನಂಬರ್ ಗಳಿಗೆ ಕರೆ ಮಾಡಿ ಸಮಸ್ಯೆ ಸರಿ ಮಾಡಿಕೊಡಿ ಎಂದು ಕೇಳಿಕೊಂಡಾಗ, ನಿಮ್ಮ ಹೆಸರಿನಲ್ಲಿ ಪೂಜೆ ಮಾಡುತ್ತೇನೆ ರೂ. 7,000.00 ಹಣ ಖರ್ಚಾಗುತ್ತೆ ಎಂದು ಹೇಳಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿಸಿಕೊಂಡು, ಪುನಃ ಬೇರೆ ಬೇರೆ ಪೂಜೆ ಮಾಡಬೇಕು ಸಮಸ್ಯೆ ಸರಿ ಆಗುತ್ತೆ ಎಂದು ಹಂತ ಹಂತವಾಗಿ ಒಟ್ಟು ರೂ. 1,16,001.00 ಹಣ ವರ್ಗಾವಣೆ ಮಾಡಿಸಿಕೊಂಡು, ಇನ್ನು ಹಲವು ಸಮಸ್ಯೆ ಗಳಿವೆ ಎಂದು ಹೇಳಿ ಪೂಜೆ ಖರ್ಚಿಗೆ ಹಣ ಕಳುಹಿಸಿ ಎಂದು ಹೇಳಿದಾಗ ಮಹಿಳೆ ಅನುಮಾನಗೊಂಡು ಚಿಕ್ಕಮಗಳೂರು ಜಿಲ್ಲಾ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿದ್ದು.

ಮೇಲ್ಕಂಡಂತೆ ಎಲ್ಲಾ ರೀತಿಯ ಸಮಸ್ಯೆಗಳನ್ನು ಫೋನ್‌ನಲ್ಲಿ ಪರಿಹರಿಸಲಾಗುವುದೆಂದು ನಂಬಿಸಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಿದ್ದ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು, ಆತನಿಂದ ರೂ. 87,500.00 ನಗದು, ಒಂದು ಮೊಬೈಲ್ ಫೋನ್ ಮತ್ತು ಎರಡು ಎಟಿಎಂ ಕಾರ್ಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಸದರಿ ಪ್ರಕರಣದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಸಿಬ್ಬಂದಿಗಳಾದ ಶ್ರೀ. ವಿನಾಯಕ ಮತ್ತು ಶ್ರೀ. ಅನ್ವರ್ ಪಾಷಾ ರವರು ಕಾರ್ಯನಿರ್ವಹಿಸಿರುತ್ತಾರೆ. ಸಾರ್ವಜನಿಕರು ಇಂತಹ ವಂಚನೆಗಳ ಜಾಲಕ್ಕೆ ಬೀಳದೇ ಎಚ್ಚರ ವಹಿಸಲು ತಿಳಿಸಲಾಗಿದೆ.

ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ

ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ ನಾರಾಯಣ ಗೌಡ

ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

- Advertisement -

Latest Posts

Don't Miss