Saturday, July 27, 2024

Latest Posts

ಹಿಂದೂಗಳ ಓಟ್ ಬೇಡ ಎನ್ನುವ ಫೇಕ್ ನ್ಯೂಸ್ ಪ್ರಕರಣ: 7 ಜನರ ವಿರುದ್ಧ ಎಫ್‌ಐಆರ್‌ ದಾಖಲು

- Advertisement -

Political News: ಸಿದ್ದರಾಮಯ್ಯನವರಿಗೆ ಹಿಂದೂಗಳ ಓಟು ಬೇಡ,ಮುಸ್ಲಿಂ ಓಟ್ ಇದ್ರೆ ಸಾಕು. ಕಾಂಗ್ರೆಸ್ ಪಕ್ಷವನ್ನು ಕಟ್ಟಿರುವುದೇ ಮುಸ್ಲಿಂರಿಗಾಗಿ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಿಸಲಾಗಿತ್ತು. ಈ ಸುಳ್ಳು ಸುದ್ದಿ ಹರಡಿಸಿದವರನ್ನು ನಾವು ಶಿಕ್ಷೆಗೆ ಗುರಿ ಪಡಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದೀಗ ಸುಳ್ಳು ಸುದ್ದಿ ಹಬ್ಬಿಸಿದ್ದ 7 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಬಾವಿಗೆ ಬಿದ್ದ ಬೆಕ್ಕಿನ ರಕ್ಷಣೆ ಮಾಡಲು ಹೋಗಿ ಐವರ ದುರ್ಮರಣ

ಚುನಾವಣೆ ಪ್ರಚಾರದ ವೇಳೆ ಮಹಿಳೆಗೆ ಕಿಸ್ ಕೊಟ್ಟ ಅಭ್ಯರ್ಥಿ: ಫೋಟೋ ವೈರಲ್‌

ಉಜ್ಜಯನಿ ದೇವಸ್ಥಾನದಲ್ಲಿ ಅಗ್ನಿ ಅವಘಡ ಪ್ರಕರಣ: ಓರ್ವ ಅರ್ಚಕ ಸಾವು

- Advertisement -

Latest Posts

Don't Miss